Saturday, 10 July 2021

ಜಮ್ಮು ಮತ್ತು ಕಾಶ್ಮೀರ: ಉಗ್ರರೊಂದಿಗೆ ಸಂಪರ್ಕ ಆರೋಪ 11 ಸರ್ಕಾರಿ ನೌಕರರು ವಜಾ

ಜಮ್ಮು ಮತ್ತು ಕಾಶ್ಮೀರ: 
ಉಗ್ರರೊಂದಿಗೆ ಸಂಪರ್ಕ ಆರೋಪ 11 ಸರ್ಕಾರಿ ನೌಕರರು ವಜಾ

ಶ್ರೀನಗರ: ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಜಮ್ಮು ಮತ್ತು ಕಾಶ್ಮೀರ 11 ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಕಣಿವೆ ರಾಜ್ಯದಲ್ಲಿ ಕಳೆದೊಂದು ವಾರದಿಂದ ನಿರಂತರವಾಗಿ ಉಗ್ರ ನಿಗ್ರಹ ಕಾರ್ಯಾಚರಣೆ ನಡೆಯುತ್ತಿದ್ದು, ಈ ವರೆಗೂ ಸುಮಾರು 9 ಉಗ್ರರರನ್ನು ಹೊಡೆದುರುಳಿಸುವಲ್ಲಿ ಸೇನಾಪಡೆಗಳು ಯಶಸ್ವಿಯಾಗಿವೆ. ಅಂತೆಯೇ ಇಬ್ಬರು ಸೇನಾಧಿಕಾರಿಗಳು ಹುತಾತ್ಮರಾಗಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ. ಈ ಕಾರ್ಯಾಚರಣೆ ಚಾಲ್ತಿಯಲ್ಲಿರುವಂತೆಯೇ ಇತ್ತ ಉಗ್ರರೊಂದಿಗೆ ಸಂಪರ್ಕ ಹೊಂದಿದ ಮತ್ತು ಉಗ್ರರಿಗೆ ನೆರವು ನೀಡಿದ ಆರೋಪದ ಮೇರೆಗೆ 11 ಸರ್ಕಾರಿ ನೌಕರರನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಈ 11 ಸರ್ಕಾರಿ ನೌಕರರು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಕೆಲಸದಿಂದ ವಜಾ ಮಾಡಲಾಗಿದ್ದು, 11 ಮಂದಿಯ ಪೈಕಿ ಅನಂತ್‌ ನಾಗ್‌ನ ಇಬ್ಬರು ಶಿಕ್ಷಕರು, ಭಯೋತ್ಪಾದಕರಿಗೆ ಮಾಹಿತಿಯನ್ನು ಒದಗಿಸಲು ಬೆಂಬಲಿಸಿದ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ ಎನ್ನಲಾಗಿದೆ.

ವಜಾಗೊಂಡ 11 ಉದ್ಯೋಗಿಗಳಲ್ಲಿ 4 ಮಂದಿ ಅನಂತ್‌ನಾಗ್, 3 ಬದ್ಗಾಮ್, ಬಾರಾಮುಲ್ಲಾ, ಶ್ರೀನಗರ, ಪುಲ್ವಾಮಾ ಮತ್ತು ಕುಪ್ವಾರಾದ ತಲಾ ಒಬ್ಬರು ಸೇರಿದ್ದಾರೆ ಎನ್ನಲಾಗಿದೆ. ಈ ಪೈಕಿ 4 ಮಂದಿ ಶಿಕ್ಷಣ ಇಲಾಖೆಯಲ್ಲಿ, 2 ಮಂದಿ ಜೆ & ಕೆ ಪೊಲೀಸ್ ಇಲಾಖೆಯಲ್ಲಿ ಮತ್ತು ಕೃಷಿ, ಕೌಶಲ್ಯ ಅಭಿವೃದ್ಧಿ, ವಿದ್ಯುತ್, ಸ್ಕೀಮ್ಸ್ ಮತ್ತು ಆರೋಗ್ಯ ಇಲಾಖೆಗಳಲ್ಲಿ ತಲಾ ಒಬ್ಬರು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.



SHARE THIS

Author:

0 التعليقات: