Monday, 5 July 2021

ದ.ಕ. ಜಿಲ್ಲೆ : ಕೋವಿಡ್‌ಗೆ 12 ಬಲಿ; 265 ಮಂದಿಗೆ ಕೊರೋನ ಪಾಸಿಟಿವ್


ದ.ಕ. ಜಿಲ್ಲೆ : ಕೋವಿಡ್‌ಗೆ 12 ಬಲಿ; 265 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಜು.5: ದ.ಕ.ಜಿಲ್ಲೆಯಲ್ಲಿ ಸೋಮವಾರ ಕೋವಿಡ್ ಸಾವು ಮತ್ತು ಸೋಂಕಿತರ ಸಂಖ್ಯೆ ಹಾಗೂ ಕೋವಿಡ್ ಪಾಸಿಟಿವಿಟಿ ಪ್ರಮಾಣದಲ್ಲಿ ತುಸು ಏರಿಕೆ ಕಂಡು ಬಂದಿದೆ.

ಸೋಮವಾರ ಕೋವಿಡ್‌ಗೆ 12 ಮಂದಿ ಬಲಿಯಾಗಿದ್ದರೆ, 265 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಅಲ್ಲದೆ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.1.74ರಿಂದ 3.45ಕ್ಕೇರಿದೆ.

ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,255ಕ್ಕೇರಿದ್ದರೆ, ಕೊರೋನ ಸೋಂಕಿಗೊಳಗಾದವರ ಸಂಖ್ಯೆ 94,072ಕ್ಕೇರಿದೆ. ಅಲ್ಲದೆ ಸೋಮವಾರ 427 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 89,572ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 3,245 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರೆಗೆ 10,85,162 ಮಂದಿಯ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 9,91,090 ಮಂದಿಯ ವರದಿ ನೆಗೆಟಿವ್ ಬಂದಿದೆ ಎಂದು ಪ್ರಕಟನೆ ತಿಳಿಸಿದೆ.


SHARE THIS

Author:

0 التعليقات: