Saturday, 17 July 2021

ಬೃಹತ್ ಗೋಡೆ ಕುಸಿದು ಬಿದ್ದು 13 ವಾಹನಗಳು ಜಖಂ.


ಬೃಹತ್ ಗೋಡೆ ಕುಸಿದು ಬಿದ್ದು 13 ವಾಹನಗಳು ಜಖಂ.

ಮಂಗಳೂರು : ಬಂದರ್‌ನ ನಲಪಾಡ್ ಕುನಿಲ್ ಟವರ್ಸ್‌ಗೆ ಹೊಂದಿಕೊಂಡಂತಿರುವ ಎಪಿಎಂಸಿ ಯಾರ್ಡ್‌ನ ತಡೆಗೋಡೆ ಕುಸಿದ ಪರಿಣಾಮ 13ಕ್ಕೂ ಹೆಚ್ಚು ವಾಹನಗಳು ಜಖಂಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.

ಅಪಾರ್ಟ್‌ಮೆಂಟ್‌ನಲ್ಲಿ ನೂರಕ್ಕೂ ಹೆಚ್ಚು ಫ್ಲ್ಯಾಟ್‌ಗಳಿದ್ದು, ಬಹುತೇಕ ಮಕ್ಕಳು ಕಟ್ಟಡದ ಆವರಣದಲ್ಲಿ ಆಟ ಆಡುತ್ತಿದ್ದರು. ಅದೃಷ್ಟವಶಾತ್ ಶನಿವಾರ ಸಂಜೆ ವೇಳೆ ಮಳೆ ಬರುತ್ತಿದ್ದರಿಂದ ಮಕ್ಕಳು ಹೊರಬಂದಿಲ್ಲ. ಇದರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ ಸ್ಥಳೀಯರು ತಿಳಿಸಿದ್ದಾರೆ.

ಕರಾವಳಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.‌ ಜೊತೆಗೆ ಎಪಿಎಂಸಿ ಯಾರ್ಡ್‌ನ ತಡೆಗೋಡೆಯೂ ಸಂಪೂರ್ಣವಾಗಿ ಸಿಥಿಲಗೊಂಡಿದೆ. ಇದರಿಂದ ಸಂಜೆ 4.30ರ ಸುಮಾರಿಗೆ ತಡೆಗೋಡೆ ಕುಸಿದಿದೆ. ಪರಿಣಾಮ ತಡೆಗೋಡೆಯ ಅವಶೇಷಗಳು ನಲಪಾಡ್ ಟವರ್ಸ್‌ನ ಕಾಂಪೌಂಡ್‌ನ್ನು ಸೇರಿದಂತೆ ಆವರಣದುದ್ದಕ್ಕು ಹರಡಿಕೊಂಡಿದೆ. ಘಟನೆಯಲ್ಲಿ 13ಕ್ಕೂ ಹೆಚ್ಚು ವಾಹನಗಳು ತಡೆಗೋಡೆಯ ಅವಶೇಷಗಳ ಅಡಿಯಲ್ಲಿ ಹೂತು ಹೋಗಿವೆ. ಅಲ್ಲದೆ, ಕಟ್ಟಡದ ಆವರಣದಲ್ಲಿದ್ದ ನೀರಿನ ಬಾವಿಯ ಅರ್ಥ ಭಾಗದಷ್ಟು ಅವಶೇಷ ತುಂಬಿಕೊಂಡಿದೆ. ನೀರು ಕುಡಿಯಲು ಯೋಗ್ಯವಲ್ಲದಂತಾಗಿದೆ ಎನ್ನುತ್ತಾರೆ ಇಲ್ಲಿನ ನಿವಾಸಿಗಳು.

ಸುಮಾರು ಒಂದೂವರೆ ಅಡಿ ಅಗಲ, 25 ಅಡಿ ಎತ್ತರ ಹಾಗೂ 100 ಅಡಿಗೂ ಹೆಚ್ಚು ಉದ್ದದ ತಡೆಗೋಡೆ ಬೀಳಲು ಎಪಿಎಂಸಿ ಯಾರ್ಡ್‌ನಲ್ಲಿ ತಡೆಗೋಡೆಗೆ ಸಮೀಪ ಸ್ಮಾರ್ಟ್‌ಸಿಟಿ ಕಾಮಗಾರಿಯ ಅವಶೇಷ ತಂದು ಸುರಿಯಲಾಗುತ್ತಿದೆ.‌ ಇದರಿಂದಾಗಿಯೇ ಗೋಡೆ ಕುಸಿದಿದೆ ಎನ್ನುತ್ತಾರೆ ಅಪಾರ್ಟ್‌ಮೆಂಟ್‌ನ ನಿವಾಸಿಗಳು‌.



SHARE THIS

Author:

0 التعليقات: