ದ.ಕ: ಕೋವಿಡ್ಗೆ 14 ಬಲಿ, 304 ಮಂದಿಗೆ ಪಾಸಿಟಿವ್
ಮಂಗಳೂರು, ಜು.7: ದ.ಕ.ಜಿಲ್ಲೆಯಲ್ಲಿ ಬುಧವಾರವೂ ಕೋವಿಡ್ ಸಾವಿನ ಸಂಖ್ಯೆ ಮತ್ತು ಕೋವಿಡ್ ಸೋಂಕಿತರ ಸಂಖ್ಯೆ ಹಾಗೂ ಕೋವಿಡ್ ಪಾಸಿಟಿವಿಟಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ.
ಬುಧವಾರ ಕೋವಿಡ್ಗೆ 14 ಮಂದಿ ಬಲಿಯಾಗಿದ್ದರೆ, 304 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಅಲ್ಲದೆ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.3.31ರಿಂದ 3.81ಕ್ಕೇರಿದೆ.
ಜಿಲ್ಲೆಯಲ್ಲಿ ಈವರೆಗೆ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 1,282ಕ್ಕೇರಿದ್ದರೆ, ಕೊರೋನ ಸೋಂಕಿಗೊಳಗಾದವರ ಸಂಖ್ಯೆ 94,592ಕ್ಕೇರಿದೆ. ಅಲ್ಲದೆ ಬುಧವಾರ 335 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 90,520ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 2,790 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರೆಗೆ 10,99,529 ಮಂದಿಯ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 10,04,947 ಮಂದಿಯ ವರದಿ ನೆಗೆಟಿವ್ ಬಂದಿದೆ.
0 التعليقات: