Friday, 9 July 2021

ಆಮ್ಲಜನಕ ಕೊರತೆ ನೀಗಿಸಲು ದೇಶಾದ್ಯಂತ 1,500 ಆಕ್ಸಿಜನ್ ಸ್ಥಾವರ ಸ್ಥಾಪನೆಗೆ ಕೇಂದ್ರ ಸರಕಾರ ನಿರ್ಧಾರ


 ಆಮ್ಲಜನಕ ಕೊರತೆ ನೀಗಿಸಲು ದೇಶಾದ್ಯಂತ 1,500 ಆಕ್ಸಿಜನ್ ಸ್ಥಾವರ ಸ್ಥಾಪನೆಗೆ ಕೇಂದ್ರ ಸರಕಾರ ನಿರ್ಧಾರ

ಹೊಸದಿಲ್ಲಿ:ಹಲವಾರು ರಾಜ್ಯಗಳಲ್ಲಿ ಅನೇಕ ಆಸ್ಪತ್ರೆಗಳು ವರದಿ ಮಾಡಿದ ಆಮ್ಲಜನಕದ ಪೂರೈಕೆಯ ಕೊರತೆಯನ್ನು ನೀಗಿಸಲು ದೇಶಾದ್ಯಂತ 1,500 ಕ್ಕೂ ಹೆಚ್ಚು ಪಿಎಸ್‌ಎ ಆಕ್ಸಿಜನ್ ಸ್ಥಾವರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಕೊರೋನದ ಮೂರನೇ ಅಲೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.

ಈ ಪಿಎಸ್‌ಎ ಆಕ್ಸಿಜನ್ ಸ್ಥಾವರಗಳು 4 ಲಕ್ಷಕ್ಕೂ ಹೆಚ್ಚು ಆಮ್ಲಜನಕಯುಕ್ತ ಹಾಸಿಗೆಗಳನ್ನು ಬೆಂಬಲಿಸುವ ಸಾಮರ್ಥ್ಯ ಹೊಂದಿವೆ ಎಂದು ಅಧಿಕಾರಿಗಳು ಪಿಎಂ ಮೋದಿಗೆ ತಿಳಿಸಿದ್ದಾರೆ.

ಪಿಎಸ್ಎ ಆಕ್ಸಿಜನ್ ಸ್ಥಾವರಗಳ ಸ್ಥಿತಿಗತಿ ಬಗ್ಗೆ ತಿಳಿಸಿದ ನಂತರ, ಈ ಸ್ಥಾವರಗಳನ್ನು ಶೀಘ್ರವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವಂತೆ ಪ್ರಧಾನಿ ಮೋದಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇಶಾದ್ಯಂತ ವೈದ್ಯಕೀಯ ಆಮ್ಲಜನಕದ ಹೆಚ್ಚಳ ಹಾಗೂ  ಲಭ್ಯತೆಯನ್ನು ಪರಿಶೀಲಿಸಲು ಪ್ರಧಾನಿ ಮೋದಿ ಶುಕ್ರವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ, ಕ್ಯಾಬಿನೆಟ್ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿ, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳು  ಸಭೆಯಲ್ಲಿ ಉಪಸ್ಥಿತರಿದ್ದರು.

ಆಸ್ಪತ್ರೆ ಘಟಕಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಆಸ್ಪತ್ರೆಯ ಸಿಬ್ಬಂದಿಗೆ ಸಾಕಷ್ಟು ತರಬೇತಿ ನೀಡಬೇಕು ಎಂದು ಪ್ರಮುಖ ಸಭೆಯಲ್ಲಿ ಪಿಎಂ ಮೋದಿ ಅವರು ಹೇಳಿದರು.

ಏತನ್ಮಧ್ಯೆ, ತಜ್ಞರು ಸಿದ್ಧಪಡಿಸಿದ ತರಬೇತಿ ಮಾಡ್ಯೂಲ್ ಇದೆ. ಅವರು ದೇಶಾದ್ಯಂತ ಸುಮಾರು 8,000 ಜನರಿಗೆ ತರಬೇತಿ ನೀಡುವ ಗುರಿ ಹೊಂದಿದ್ದಾರೆ ಎಂದು ಅಧಿಕಾರಿಗಳು ಪ್ರಧಾನಿಗೆ ಮಾಹಿತಿ ನೀಡಿದರು.


SHARE THIS

Author:

0 التعليقات: