ಇಂದು ಪ್ರಧಾನಿ ಮೋದಿ ವಾರಾಣಸಿಗೆ ಭೇಟಿ :
1500 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿ 1500 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಪ್ರಧಾನಿ ಮೋದಿ ಅವರು ಬುಧವಾರ ಸಂಜೆ ಟ್ವೀಟ್ ಮಾಡಿದ್ದಾರೆ, ' ಜುಲೈ 15 ರಂದು ನಾನು ಕಾಶಿಯಲ್ಲಿ 1500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಕಾರ್ಯಗಳನ್ನು ಉದ್ಘಾಟಿಸಲಿದ್ದೇನೆ ಎಂದು ಹೇಳಿದ್ದಾರೆ.
ಬಿಎಚ್ ಯುನಲ್ಲಿ 100 ಹಾಸಿಗೆಗಳ ಎಂಸಿಎಚ್ ವಿಭಾಗ, ಗಂಗಾ ನದಿಯ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ರೋ-ರೋ ಹಡಗುಗಳು, ಗೋದೌಲಿಯಾದಲ್ಲಿ ಬಹು ಹಂತದ ಪಾರ್ಕಿಂಗ್ ಮತ್ತು ವಾರಾಣಸಿ-ಗಾಜಿಪುರ ಹೆದ್ದಾರಿಯಲ್ಲಿ ಮೂರು ಪಥದ ಫ್ಲೈಓವರ್ ಸೇತುವೆ ಸೇರಿದಂತೆ ವಿವಿಧ ಸಾರ್ವಜನಿಕ ಯೋಜನೆಗಳು ಮತ್ತು ಕಾಮಗಾರಿಗಳನ್ನು ಪ್ರಧಾನಮಂತ್ರಿಯವರು ಇಂದು ಉದ್ಘಾಟಿಸಲಿದ್ದಾರೆ.
0 التعليقات: