Wednesday, 28 July 2021

ರಾಜ್ಯದಲ್ಲಿಂದು 1,531 ಮಂದಿಗೆ ಕೊರೋನ ದೃಢ, 19 ಮಂದಿ ಸಾವು


ರಾಜ್ಯದಲ್ಲಿಂದು 1,531 ಮಂದಿಗೆ ಕೊರೋನ ದೃಢ, 19 ಮಂದಿ ಸಾವು

ಬೆಂಗಳೂರು, ಜು.28: ರಾಜ್ಯದಲ್ಲಿ ಬುಧವಾರ 1,531 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 19 ಜನರು ಸೋಂಕಿಗೆ ಬಲಿಯಾಗಿದ್ದು, 1,430 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 28,99,195ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 36,456ಕ್ಕೆ ತಲುಪಿದೆ. 

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 22,569ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ರಾಜಧಾನಿಯಲ್ಲಿ ಬುಧವಾರದಂದು 376 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 3 ಜನರು ಮೃತಪಟ್ಟಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,25,957 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 15,843 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,01,937 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 



SHARE THIS

Author:

0 التعليقات: