Saturday, 17 July 2021

ರಾಜ್ಯದಲ್ಲಿ ಶನಿವಾರ 1,869 ಕೋವಿಡ್ ಪ್ರಕರಣ ದೃಢ, 42 ಮಂದಿ ಸಾವು


ರಾಜ್ಯದಲ್ಲಿ ಶನಿವಾರ 1,869 ಕೋವಿಡ್ ಪ್ರಕರಣ ದೃಢ, 42 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಶನಿವಾರ 1,869 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು,  42 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಇಂದು 3,144 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವೆಗೂ ಒಟ್ಟು 28,82,239 ಸೋಂಕಿತ ಪ್ರಕರಣಗಳು ದಾಖಲಾಗಿದ್ದು, 36,121 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ 30,082 ಸಕ್ರಿಯ ಪ್ರಕರಣಗಳಿದ್ದು, ಅವರೆಲ್ಲರೂ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರ, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

42ಮಂದಿ ಸಾವು: ಶನಿವಾರ ರಾಜ್ಯದಲ್ಲಿ 42ಮಂದಿ ಸಾವನ್ನಪ್ಪಿದ್ದು, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 6, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ದಕ್ಷಿಣಕನ್ನಡ 5, ಧಾರವಾಡ 1, ಹಾಸನ 3, ಕೋಲಾರ 4, ಮಂಡ್ಯ 3, ಮೈಸೂರು 7, ಶಿವಮೊಗ್ಗ 1, ತುಮಕೂರು 2, ಉಡುಪಿ 1 ಸಾವಿನ ಪ್ರಕರಣ ವರದಿಯಾಗಿದೆ.

ಸೋಂಕಿತ ಪ್ರಕರಣಗಳು: ರಾಜ್ಯದಲ್ಲಿ ಶನಿವಾರ 1,869 ಸೋಂಕಿತ ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 4, ಬಳ್ಳಾರಿ 11, ಬೆಳಗಾವಿ 97, ಬೆಂಗಳೂರು ಗ್ರಾಮಾಂತರ 46, ಬೆಂಗಳೂರು ನಗರ 432, ಬೀದರ್ 1, ಚಾಮರಾಜನಗರ 15, ಚಿಕ್ಕಬಳ್ಳಾಪುರ 13, ಚಿಕ್ಕಮಗಳೂರು 101, ಚಿತ್ರದುರ್ಗ 15, ದಕ್ಷಿಣಕನ್ನಡ 218, ದಾವಣಗೆರೆ 21, ಧಾರವಾಡ 24, ಹಾಸನ 173, ಹಾವೇರಿ 14, ಕಲಬುರಗಿ 6, ಕೊಡಗು 51, ಕೋಲಾರ 46, ಕೊಪ್ಪಳ 1, ಮಂಡ್ಯ 37, ಮೈಸೂರು 207, ರಾಯಚೂರು 3, ರಾಮನಗರ 11, ಶಿವಮೊಗ್ಗ 83, ತುಮಕೂರು 92, ಉಡುಪಿ 94, ಉತ್ತರಕನ್ನಡ 49, ವಿಜಯಪುರ 2, ಯಾದಗಿರಿಜಿಲ್ಲೆ 2 ಪ್ರಕರಣಗಳು ಪತ್ತೆಯಾಗಿವೆ.


SHARE THIS

Author:

0 التعليقات: