Sunday, 18 July 2021

ಅನ್ ಲಾಕ್ 4.0: ಜು.26 ರಿಂದ ಉನ್ನತ ಶಿಕ್ಷಣ ಕಾಲೇಜುಗಳು ಪುನಾರಾರಂಭ


 ಅನ್ ಲಾಕ್ 4.0: ಜು.26 ರಿಂದ ಉನ್ನತ ಶಿಕ್ಷಣ ಕಾಲೇಜುಗಳು ಪುನಾರಾರಂಭ

ಬೆಂಗಳೂರು: ರಾಜ್ಯ ಸರಕಾರ ಜಾರಿಗೊಳಿಸಿರುವ ಅನ್ ಲಾಕ್ 3.0 ಜು.19ರಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ರವಿವಾರ ಬೆಳಗ್ಗೆ ಸಚಿವರು ಮತ್ತು ಅಧಿಕಾರಿಗಳ ಉನ್ನತಮಟ್ಟದ ಸಭೆ ನಡೆಯಿತು.

ಸಭೆಯಲ್ಲಿ ಜು.26ರಿಂದ ಪದವಿ ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.  

ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದವರು ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ರಾತ್ರಿ ಕರ್ಫ್ಯೂ ಅವಧಿಯನ್ನು ಪರಿಷ್ಕರಿಸಲಾಗಿದ್ದು, ರಾತ್ರಿ 10 ರಿಂದ ಬೆಳಗ್ಗೆ 5ರವರೆಗೆ ಮಾತ್ರ ಕರ್ಫ್ಯೂ ಇರಲಿದೆ. ಚಿತ್ರಮಂದಿರಗಳು ಮತ್ತು ರಂಗಮಂದಿರಗಳಲ್ಲಿ ಶೇಕಡ 50ರಷ್ಟು ಆಸನಗಳ ಭರ್ತಿಯೊಂದಿಗೆ ಪ್ರದರ್ಶನ ಆರಂಭಿಸಲು ಅನುಮತಿ ನೀಡಲಾಗಿದೆ. ದೇವಸ್ಥಾನಗಳಲ್ಲಿ ಜು.20ರಿಂದ ಪೂಜೆ, ಪುನಸ್ಕಾರಕ್ಕೂ ಅವಕಾಶ ಮಾಡಿಕೊಡಲಾಗಿದೆ ಎಂದು ಸಭೆಯ ಬಳಿಕ ಆರ್.ಅಶೋಕ್ ತಿಳಿಸಿದ್ದಾರೆ.

 ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವರಾದ ಆರ್.ಅಶೋಕ್, ಅರವಿಂದ ಲಿಂಬಾವಳಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


SHARE THIS

Author:

0 التعليقات: