ದ.ಕ. ಜಿಲ್ಲೆಯಲ್ಲಿ ಜು.5ರಿಂದ ರಾತ್ರಿ 9ರವರೆಗೆ ಖಾಸಗಿ ಬಸ್ ಓಡಾಟ : ದಿಲ್ ರಾಜ್ ಆಳ್ವ
ಮಂಗಳೂರು: ಕೋವಿಡ್ ಎರಡನೇ ಅಲೆ ತಡೆಗಟ್ಟಲು ಹೇರಿದ್ದ ನಿರ್ಬಂಧಗಳ ಪೂರ್ಣ ಪ್ರಮಾಣದ ಅನ್ಲಾಕ್-3 ಘೋಷಣೆಯ ಬೆನ್ನಲ್ಲೇ ಜು.5ರಿಂದ 19ರವರೆಗೆ ರಾತ್ರಿ 9 ಗಂಟೆವರೆಗೆ ಖಾಸಗಿ ಬಸ್ ಓಡಾಟಕ್ಕೆ ಅವಕಾಶ ಸಿಕ್ಕಂತಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ರಾತ್ರಿ 9 ಗಂಟೆವರೆಗೆ ಖಾಸಗಿ ಬಸ್ಗಳು ಸಾರಿಗೆ ಸೇವೆ ನೀಡಲು ಸಜ್ಜಾಗಿವೆ.
ಈ ಬಗ್ಗೆ ಮಾತನಾಡಿದ ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ, ರಾಜ್ಯ ಸರಕಾರದ ಪರಿಷ್ಕೃತ ಆದೇಶದಲ್ಲಿ ರಾತ್ರಿ 9 ಗಂಟೆವರೆಗೆ ಬಸ್ ಓಡಿಸಲು ಅನುಮತಿಸಲಾಗಿದೆ. ಜಿಲ್ಲೆಯಲ್ಲಿ ರಾತ್ರಿ 9ರ ಒಳಗಾಗಿ ಬಸ್ ಸಂಚಾರ ನಿಲುಗಡೆಯಾಗಬೇಕು. ಹಾಗಾಗಿ ಕೊನೆಯ ಟ್ರಿಪ್ನ್ನು ಕಡಿತ ಮಾಡುವ ಅಗತ್ಯವಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಸೋಮವಾರ ಸುಮಾರು 80-100 ಬಸ್ಗಳು ಸಂಚರಿಸುವ ಸಾಧ್ಯತೆ ಇದೆ. ಬಹುತೇಕ ಬಸ್ಗಳು ಸೇವೆಗೆ ಸಿದ್ಧಗೊಂಡಿದ್ದು, ಸೋಮವಾರ ಬೆಳಗ್ಗೆ ಇದರ ನಿಖರ ಸಂಖ್ಯೆ ದೊರೆಯಲಿದೆ ಎಂದು ಅವರು ಹೇಳಿದರು.
0 التعليقات: