ಕೋವಿನ್ ಜಾಗತಿಕ ಸಮಾವೇಶ: ಜುಲೈ 5ಕ್ಕೆ ಪಿಎಂ ಮೋದಿ ಭಾಷಣ
ನವದೆಹಲಿ: ಕೋವಿಡ್ 19ರ ವಿರುದ್ಧ ರಾಷ್ಟ್ರದಾದ್ಯಂತ ಲಸಿಕೆ ನೀಡಲು ಆರಂಭಿಸಲಾದ ಕೋವಿನ್ ಕಾರ್ಯಕ್ರಮವನ್ನು ಜಾಗತಿಕ ಮಟ್ಟಕ್ಕೆ ವಿಸ್ತರಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 5ರಂದು ನಡೆಯಲಿರುವ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ.
ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ರಾಷ್ಟ್ರೀಯ ಆರೋಗ್ಯ ಸಮಿತಿಯ ಸಹಯೋಗದಲ್ಲಿ ಜು.5ರಂದು ಸಂಜೆ 3 ಗಂಟೆಗೆ ಕೋವಿನ್ ಜಾಗತಿಕ ಸಮಾವೇಶ ನಡೆಯಲಿದೆ.
ಕಾರ್ಯಕ್ರಮದಲ್ಲಿ ಪಿಎಂ ಮೋದಿ ವಿಶೇಷವಾದ ಸಂದೇಶವನ್ನು ಹಂಚಿಕೊಳ್ಳಲಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಸಮಿತಿ (ಎನ್ಎಚ್ಎ) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
0 التعليقات: