ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಕೆ. ಅಣ್ಣಾಮಲೈ ನೇಮಕ
ಚೆನ್ನೈ: ಉಡುಪಿ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ ಹಲವು ಕಡೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಗುರುವಾರ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಿಸಲಾಗಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಕೆ.ಅಣ್ಣಾ ಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.
ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಎಲ್.ಮುರುಗನ್ ಬುಧವಾರ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನ ಈ ಆಯ್ಕೆ ನಡೆದಿದೆ.
ಅಣ್ಣಾಮಲೈ ತಮ್ಮ ವೃತ್ತಿಗೆ ರಾಜೀನಾಮೆ ನೀಡಿದ ಬಳಿಕ 2020ರ ಆಗಸ್ಟ್ ನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಅಣ್ಣಾಮಲೈ ಅವರನ್ನು ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಇತ್ತೀಚೆಗೆ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅರಾವಕುರುಚಿ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.
0 التعليقات: