Monday, 19 July 2021

ಉಳ್ಳಾಲ : ಎಸೆಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಬೆಂಕಿ ಆಕಸ್ಮಿಕ


 ಉಳ್ಳಾಲ : ಎಸೆಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಬೆಂಕಿ ಆಕಸ್ಮಿಕ

ಮಂಗಳೂರು: ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕೇಂದ್ರದ ಕೊಠಡಿಯೊಂದಕ್ಕೆ ಬೆಂಕಿ ತಗುಲಿದ ಘಟನೆ ಉಳ್ಳಾಲ ಸಮೀಪದ ಬಬ್ಬುಕಟ್ಟೆ ಹಿರಾ ಸ್ಕೂಲ್ ನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

ಶಾಲೆಯ ಲ್ಯಾಬ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಪರೀಕ್ಷಾ ಕೇಂದ್ರದ ಸಿಬ್ಬಂದಿ ವಿದ್ಯಾರ್ಥಿಗಳನ್ನು ಇನ್ನೊಂದು ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ತಗುಲಿರಬಹುದೆಂದು ಶಂಕಿಸಲಾಗಿದೆ.

ಉಳ್ಳಾಲ ಠಾಣೆ ಪೊಲೀಸರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಕಮಿಷನರ್ ಶಶಿಕುಮಾರ್, ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
SHARE THIS

Author:

0 التعليقات: