ನೇತ್ರಾವತಿ ನೀರಿನ ಮಟ್ಟ ಏರಿಕೆ
ಬಂಟ್ವಾಳ, ಜು.15: ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಗುರುವಾರ ಏರಿಕೆಯಾಗಿದೆ.
ಬೆಳಗ್ಗೆ ನೇತ್ರಾವತಿ ನದಿಯಲ್ಲಿ 6.4 ಮೀಟರ್ ಎತ್ತರದಲ್ಲಿ ನೀರು ಹರಿಯುತ್ತಿತ್ತು. ಸಂಜೆಯ ವೇಳೆಗೆ ನೀರಿನ ಮಟ್ಟ 7 ಮೀಟರ್ ಮಟ್ಟಕ್ಕೆ ಏರಿಕೆಯಾಗಿದೆ. ನದಿಯ ಅಪಾಯದ ಮಟ್ಟ 8.5 ಮೀಟರ್ ಆಗಿದೆ.
ಬುಧವಾರ ಬೆಳಗ್ಗೆ 8ರಿಂದ ಗುರುವಾರ ಬೆಳಗ್ಗೆ 8ರ ವರೆಗೆ ತಾಲೂಕಿನಲ್ಲಿ 83.2 ಮಿಲಿ ಮೀಟರ್ ಮಳೆಯಾಗಿದೆ ಎಂದು ಬಂಟ್ವಾಳ ತಾಲೂಕು ಆಡಳಿತ ಪ್ರಕಟನೆ ತಿಳಿಸಿದೆ.
0 التعليقات: