Tuesday, 27 July 2021

ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಪೋಟ : ಹತ್ತು ಮಂದಿ ನಾಪತ್ತೆ


ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಪೋಟ : ಹತ್ತು ಮಂದಿ ನಾಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಯಲ್ಲಿ ಮೇಘ ಸ್ಫೋಟ ಉಂಟಾಗಿದ್ದು, ಪರಿಣಾಮವಾಗಿ ಒಬ್ಬರು ಗಾಯಗೊಂಡಿದ್ದು, ಸುಮಾರು 10 ಜನರು ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಲಾಹೌಲ್‌ನ ಉದಯಪುರದಲ್ಲಿ ಸಂಭವಿಸಿದ ಮೇಘ ಸ್ಫೋಟದಿಂದಾಗಿ, ಖಾಸಗಿ ಜೆಸಿಬಿಯೊಂದು ಕೊಚ್ಚಿ ಹೋಗಿದೆ. 19 ವರ್ಷದ ಕಾರ್ಮಿಕ ಮೊಹಮ್ಮದ್ ಅಲ್ತಾಫ್ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

10ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರನ್ನು ಹುಡುಕಲು ರಾಜ್ಯ ಪೊಲೀಸರು ಮತ್ತು ಐಟಿಬಿಪಿ ತಂಡಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕ ಸುದೇಶ್ ಕುಮಾರ್ ಮೊಕ್ತಾ ತಿಳಿಸಿದ್ದಾರೆ.


SHARE THIS

Author:

0 التعليقات: