Tuesday, 13 July 2021

ಕಲಬುರಗಿ: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಪರಾರಿ


 ಕಲಬುರಗಿ: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಪರಾರಿ

ಕಲಬುರಗಿ: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೋರ್ವ ಪರಾರಿಯಾಗಿರುವ ಘಟನೆ ನಗರದಲ್ಲಿಂದು ಮುಂಜಾನೆ ನಡೆದಿರುವುದು ವರದಿಯಾಗಿದೆ.

ಸಿದ್ದಪ್ಪ ಅಲ್ಲೂರು(22) ಪರಾರಿಯಾದ ಕೈದಿ. ಚಿತ್ತಾಪುರ ತಾಲೂಕಿನ ಅಲ್ಲೂರು (ಬಿ) ಗ್ರಾಮದ ನಿವಾಸಿಯಾಗಿರುವ ಈತ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತ ಆರೋಪಿ. ಎರಡು ತಿಂಗಳ ಹಿಂದೆ ಸ್ನೇಹಿತನ ಕೊಲೆ ಪ್ರಕರಣದಲ್ಲಿ ಈತ ಜೈಲು ಸೇರಿದ್ದನೆನ್ನಲಾಗಿದೆ.

ಕೇಂದ್ರ ಕಾರಾಗೃಹದಲ್ಲಿದ್ದ ಸಿದ್ದಪ್ಪ ಅಲ್ಲಿ ಅಸಹಜ ವರ್ತನೆ ತೋರುತ್ತಿದ್ದ ಹಿನ್ನೆಲೆಯಲ್ಲಿ 4 ದಿನಗಳ ಹಿಂದೆ ಆತನನ್ನು ನಗರದ ಜಿಮ್ಸ್ ಆಸ್ಪತ್ರೆಯ ಜೈಲು ವಾರ್ಡ್ ಗೆ ಸ್ಥಳಾಂತರಿಸಲಾಗಿತ್ತು. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಆತ ವಾರ್ಡ್ ಕಿಟಕಿಯ ಮೂಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


SHARE THIS

Author:

0 التعليقات: