Tuesday, 27 July 2021

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ


ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಇಂದು ನಡೆದಂತ ರಾಜ್ಯ ಸಂಸದೀಯ ಮಂಡಳಿಯ ಸಭೆಯಲ್ಲಿ ಹಂಗಾಮಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಸವರಾಜ ಬೊಮ್ಮಾಯಿಯವರನ್ನು ನೂತನ ಮುಖ್ಯಮಂತ್ರಿಯಾಗಿ ಪ್ರಸ್ತಾಪ ಮಾಡಿದರು. ಇಂತಹ ಪ್ರಸ್ತಾಪಕ್ಕೆ ಗೋವಿಂದ ಕಾರಜೋಳ ಅವರು ಅನುಮೋದನೆ ನೀಡಿದರು. ಈ ಮೂಲಕ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ರಾಜ್ಯದ 20ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತ್ರ, ಈಗ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯನ್ನು ಇಂದಿನ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದಾರೆ. ಆದ್ರೇ ಈ ಕುರಿತಂತೆ ಸಂಸದೀಯ ಮಂಡಳಿಯ ಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಇಂದು ಮಹತ್ವದ ಬಿಜೆಪಿ ಸಂಸದೀಯ ಮಂಡಳಿಯ ಸಭೆಯು, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಕೇಂದ್ರ ಸಚಿವರಾದಂತ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿಯವರು ವೀಕ್ಷಕರಾಗಿ ನೇಮಕಗೊಂಡಿದ್ದರು. ಹೀಗೆ ವೀಕ್ಷಕರಾಗಿ ನೇಮಕಗೊಂಡಿದ್ದಂತ ಇವರ ಮುಂದಾಳತ್ವದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಹಂಗಾಮಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಮತ್ತೆ ರಾಜ್ಯದ ಸಿಎಂ ಆಗಿ ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. 

ಅಂದಹಾಗೇ, ಬಸವರಾಜ್ ಸೋಮಪ್ಪ ಬೊಮ್ಮಾಯಿಯವರು ಜನವರಿ 28, 1960ರಲ್ಲಿ ಜನಿಸಿದ್ದಾರೆ. ಕರ್ನಾಟಕದ ರಾಜಕಾರಣಿಯಾಗಿದ್ದು, ಅವರು ಕರ್ನಾಟಕದ ಗೃಹ ವ್ಯವಹಾರಗಳು, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸಕಾಂಗದ ಪ್ರಸ್ತುತ ರಾಜ್ಯ ಸಚಿವರಾಗಿದ್ದಾರೆ. ಹಾವೇರಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಈ ಹಿಂದೆ ಕರ್ನಾಟಕ ಸರ್ಕಾರದಲ್ಲಿ ಜಲಸಂಪನ್ಮೂಲ ಮತ್ತು ಸಹಕಾರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಮಗ. ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದ ಅವರು ಜನತಾ ದಳದಿಂದ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು.

ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ, ಎರಡು ಬಾರಿ (1998 ಮತ್ತು 2004ರಲ್ಲಿ) ಧಾರವಾಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದಿಂದ ಆಯ್ಕೆಯಾದರು. ಅವರು ಜನತಾದಳ (ಯುನೈಟೆಡ್) ತೊರೆದು ಫೆಬ್ರವರಿ, 2008ರಲ್ಲಿ ಭಾರತೀಯ ಜನತಾ ಪಕ್ಷವನ್ನು ಸೇರಿದರು. 2008ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಅವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದರು.

ಪದವೀಧರ ಎಂಜಿನಿಯರ್ ಮತ್ತು ವೃತ್ತಿಯಲ್ಲಿ ಕೃಷಿಕ ಮತ್ತು ಕೈಗಾರಿಕೋದ್ಯಮಿ, ಅವರು ಅಸಂಖ್ಯಾತ ನೀರಾವರಿ ಯೋಜನೆಗಳಿಗೆ ನೀಡಿದ ಕೊಡುಗೆಗಳು ಮತ್ತು ಕರ್ನಾಟಕದ ನೀರಾವರಿ ವಿಷಯಗಳಿಗೆ ಸಂಬಂಧಿಸಿದಂತೆ ಆಳವಾದ ಜ್ಞಾನಕ್ಕಾಗಿ ವ್ಯಾಪಕವಾಗಿ ಮೆಚ್ಚುಗೆ ಪಡೆದರು. ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿ ಭಾರತದ ಮೊದಲ 100% ಕೊಳವೆ ನೀರಾವರಿ ಯೋಜನೆಯನ್ನು ಜಾರಿಗೊಳಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ.

ಹೀಗೆ ರಾಜಕೀಯ ಹಿನ್ನಲೆ, ಉತ್ತಮ ನಡೆ, ವಿದ್ಯಾರ್ಹತೆ ಹೊಂದಿರುವವರು, ರಾಜಕೀಯ ಅನುಭವ ಹೊಂದಿರುವಂತ ಬಸವರಾಜ ಬೊಮ್ಮಾಯಿಯವರನ್ನು ಬಿಎಸ್ ಯಡಿಯೂರಪ್ಪ ನಂತ್ರ, ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಆಯ್ಕೆಯಾಗಿದ್ದಾರೆ. ಆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.


SHARE THIS

Author:

0 التعليقات: