Monday, 5 July 2021

ತೃಣಮೂಲ ಕಾಂಗ್ರೆಸ್ ಸೇರಲು ಸಜ್ಜಾದ ಪ್ರಣಬ್ ಮುಖರ್ಜಿ ಪುತ್ರ ಅಭಿಜಿತ್ ಮುಖರ್ಜಿ


 ತೃಣಮೂಲ ಕಾಂಗ್ರೆಸ್ ಸೇರಲು ಸಜ್ಜಾದ ಪ್ರಣಬ್ ಮುಖರ್ಜಿ ಪುತ್ರ ಅಭಿಜಿತ್ ಮುಖರ್ಜಿ

ಕೋಲ್ಕತಾ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ, ಪಶ್ಚಿಮಬಂಗಾಳದ ಜಂಗೀಪುರ ಲೋಕಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಸಂಸದ ಅಭಿಜಿತ್ ಮುಖರ್ಜಿ ತೃಣಮೂಲ ಕಾಂಗ್ರೆಸ್(ಟಿಎಂಸಿ)ಗೆ ಸೇರಲು ಸಜ್ಜಾಗಿದ್ದಾರೆ ಎಂದು India Today ವರದಿ ಮಾಡಿದೆ.

ಮುಖರ್ಜಿ ಕಳೆದ ಕೆಲವು ವಾರಗಳಿಂದ ಟಿಎಂಸಿ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ್ದಾರೆ. ಅಭಿಜಿತ್ ಮುಖರ್ಜಿ ಅವರು ಕಳೆದ ತಿಂಗಳು ಕೋಲ್ಕತ್ತಾದಲ್ಲಿ ಅಭಿಷೇಕ್ ಬ್ಯಾನರ್ಜಿಯನ್ನು ಭೇಟಿಯಾಗಿದ್ದರು.

ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ ಹಾಗೂ  ಅಭಿಜಿತ್ ಮುಖರ್ಜಿ ಅವರನ್ನು ಸೋಮವಾರ ನಂತರ ಪಕ್ಷಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ, ಕೋಲ್ಕತ್ತಾದಲ್ಲಿ ಬೆಳಕಿಗೆ ಬಂದಿರುವ ನಕಲಿ ವ್ಯಾಕ್ಸಿನೇಷನ್ ಗೆ ಸಂಬಂಧಿಸಿ ಅಭಿಜಿತ್ ಮುಖರ್ಜಿ ಟ್ವಿಟರ್ ನಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ ವ್ಯಕ್ತಪಡಿಸಿದ್ದರು.

ಮಮತಾ ಬ್ಯಾನರ್ಜಿ ಬಗ್ಗೆ ಅಭಿಜಿತ್ ಮುಖರ್ಜಿ ಅವರ ಮುಕ್ತ ಬೆಂಬಲವು  ಪಶ್ಚಿಮ ಬಂಗಾಳ ಕಾಂಗ್ರೆಸ್ ಘಟಕ ಮತ್ತು ಪಕ್ಷದ ಮುಖಂಡ ಅಧೀರ್ ರಂಜನ್ ಚೌಧರಿ ಅವರ ನಡುವಿನ  ಅಂತರವನ್ನು ಮತ್ತಷ್ಟು ವಿಸ್ತರಿಸಿದೆ.


SHARE THIS

Author:

0 التعليقات: