Saturday, 10 July 2021

ಕರ್ನಾಟಕದ ರಾಜ್ಯಪಾಲರಾಗಿ ತಾವರ್‌ ಚಂದ್ ಗೆಹ್ಲೋಟ್‌ ಪ್ರಮಾಣ ವಚನ ಸ್ವೀಕಾರ


 ಕರ್ನಾಟಕದ ರಾಜ್ಯಪಾಲರಾಗಿ ತಾವರ್‌ ಚಂದ್ ಗೆಹ್ಲೋಟ್‌ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ ಚಂದ್ ಗೆಹ್ಲೋಟ್‌ ಅವರು ರವಿವಾರ ಬೆಳಗ್ಗೆ 10:30ಕ್ಕೆ ರಾಜ ಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣವಚನ ಬೋಧಿಸಿದರು.

ತಾವರ್‌ ಚಂದ್‌ ಗೆಹ್ಲೋಟ್, ಮಧ್ಯಪ್ರದೇಶದವರು. ಮೂರು ಬಾರಿ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಗೆಹ್ಲೋಟ್‌, ರಾಜ್ಯಸಭೆಯ ಸದಸ್ಯರಾಗಿದ್ದರು. ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿದ್ದರು.

ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಗೆಹ್ಲೋಟ್ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಹಾರೈಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ,  ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
SHARE THIS

Author:

0 التعليقات: