Wednesday, 7 July 2021

ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ ರಾಜೀನಾಮೆ


 ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸುದ್ಧಿಸಂಸ್ಥೆ ಪಿಟಿಐ ಬುಧವಾರ ಟ್ವೀಟ್ ಮಾಡಿದೆ.

ನರೇಂದ್ರ ಮೋದಿ ಸರಕಾರವು ಬುಧವಾರ ಸಂಜೆ 6 ಗಂಟೆ ಸಂಪುಟ ಪುನರ್ ರಚನೆ ಹಾಗೂ ವಿಸ್ತರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸದಾನಂದ ಗೌಡ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈಗಾಗಲೇ ಇನ್ನಿಬ್ಬರು ಸಚಿವರಾದ ಸಂತೋಷ್ ಗಂಗ್ವಾರ್ ಹಾಗೂ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಕ್ರಮವಾಗಿ ಕಾರ್ಮಿಕ ಹಾಗೂ ಶಿಕ್ಷಣ  ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೂ ಸಚಿವ ಸ್ಥಾನ ಸಿಗುವುದು ಖಚಿತವಾಗಿದೆ. ಚಿತ್ರದುರ್ಗದ ಸಂಸದ ಎ.ನಾರಾಯಣ ಸ್ವಾಮಿ ಹಾಗೂ ಶೋಭಾ ಅವರು ಇಂದು  ಮೋದಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು ಎಂದು ವರದಿಯಾಗಿದೆ.


SHARE THIS

Author:

0 التعليقات: