ಕೇರಳ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರ ಜಾಮೀನು ಅರ್ಜಿ ತಿರಸ್ಕರಿಸಿದ ಮಥುರಾ ನ್ಯಾಯಾಲಯ
ಲಕ್ನೊ: ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಎದುರಿಸುತ್ತಿರುವ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶದ ಮಥುರಾದ ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿದೆ.
ನ್ಯಾಯಾಧೀಶ ಅನಿಲ್ ಕುಮಾರ್ ಪಾಂಡೆ ಅವರು ಕಪ್ಪನ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದರು.
ತನ್ನ ವಿರುದ್ಧದ ಪ್ರಕರಣವನ್ನು ಸಮರ್ಥಿಸುವ ಯಾವುದೇ ಪುರಾವೆಗಳಿಲ್ಲ. ಎಫ್ಐಆರ್ನಲ್ಲಿ ಹೇಳಲಾದ ಸಂಗತಿಗಳು ಕಟ್ಟುಕಥೆ ಹಾಗೂ ಕುಶಲತೆಯಿಂದ ಕೂಡಿದೆ ಎಂದು ಕಪ್ಪನ್ ನ್ಯಾಯಾಲಯಕ್ಕೆ ತಿಳಿಸಿದರು.
ಕಳೆದ ವರ್ಷ ಉತ್ತರ ಪ್ರದೇಶದ ಹತ್ರಸ್ ನಲ್ಲಿ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವರದಿಗಾಗಿ ತೆರಳುವ ಮಾರ್ಗ ಮಧ್ಯೆ ಉತ್ತರ ಪ್ರದೇಶ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಕಪ್ಪನ್ ಹಾಗೂ ಇತರ ಆರೋಪಿಗಳ ವಿರುದ್ದ ದಾಖಲಾದ ಜಾಮೀನು ಆರೋಪಗಳನ್ನು ಮಥುರಾ ನ್ಯಾಯಾಲಯ ಇತ್ತೀಚೆಗೆ ಕೈಬಿಟ್ಟಿತ್ತು.
0 التعليقات: