ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಪರೀಕ್ಷೆ ಬರೆದ ಎಲ್ಲರೂ ಉತ್ತೀರ್ಣ
ಬೆಂಗಳೂರು: 2020-2021ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಗೆ ನೋಂದಣಿಯಾಗಿದ್ದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ಕುಮಾರ್ ತಿಳಿಸಿದ್ದಾರೆ.
ಎಸೆಸೆಲ್ಸಿ ಹಾಗೂ ಪ್ರಥಮ ಪಿಯುಸಿಯಲ್ಲಿ ಪಡೆದಿರುವ ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ಪಡೆದಿದ್ದಾರೆ.
6,66,497 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 4,50,70 ವಿದ್ಯಾರ್ಥಿಗಳು ಪ್ರಥಮ, 1,47,055 ದ್ವಿತೀಯ ಹಾಗೂ 68,729 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಸಚಿವ ಸುರೇಶ್ಕುಮಾರ್ ತಿಳಿಸಿದ್ದಾರೆ.
0 التعليقات: