Monday, 19 July 2021

ವಿಶಾಲ ಗಾಣಿಗ ಕೊಲೆ ಪ್ರಕರಣ : ಪೊಲೀಸರಿಂದ ಪತಿಯ ತೀವ್ರ ವಿಚಾರಣೆ


 ವಿಶಾಲ ಗಾಣಿಗ ಕೊಲೆ ಪ್ರಕರಣ : ಪೊಲೀಸರಿಂದ ಪತಿಯ ತೀವ್ರ ವಿಚಾರಣೆ

ಉಡುಪಿ: ಕುಮ್ರಗೋಡು ಗ್ರಾಮದಲ್ಲಿರುವ ಫ್ಲ್ಯಾಟ್‌ನಲ್ಲಿ ನಡೆದಿರುವ ವಿಶಾಲ ಗಾಣಿಗ(35) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಆಕೆಯ ಪತಿ ಬೀಜೂರು ಚಾರುಕೊಡ್ಲು ನಿವಾಸಿ ರಾಮಕೃಷ್ಣ ಗಾಣಿಗ ಎಂಬವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪತ್ನಿಯ ಕೊಲೆಯ ನಂತರ ದುಬೈಯಿಂದ ಊರಿಗೆ ಬಂದಿದ್ದ ರಾಮಕೃಷ್ಣ ಅವರನ್ನು ಪೊಲೀಸರು ಎರಡು ಮೂರು ಬಾರಿ ವಿಚಾರಣೆ ನಡೆಸಿದ್ದರು. ಇದೀಗ ಸಂಶಯದ ಮೇರೆಗೆ ಕೆಲವೊಂದು ಮಾಹಿತಿಗಾಗಿ ರಾಮಕೃಷ್ಣ ಅವರನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಅಧಿಕೃತ ಮೂಲಗಳಿಂದ ಲಭ್ಯವಾಗಿದೆ.

ಸುಪಾರಿ ನೀಡಿ ವಿಶಾಲ ಗಾಣಿಗ ಅವರನ್ನು ಕೊಲೆಗೈದಿರುವ ಸಂಶಯ ವ್ಯಕ್ತವಾಗಿದೆ. ಈ ಸಂಬಂಧ ಇಬ್ಬರು ಸುಪಾರಿ ಕಿಲ್ಲರ್‌ಗಳನ್ನು ಪೊಲೀಸರು ಹೊರ ರಾಜ್ಯದಲ್ಲಿ ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ. ಪೊಲೀಸರಿಂದ ತನಿಖೆ ಮುಂದುವರೆದಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

ದುಬೈಯಿಂದ ಮಗುವಿನೊಂದಿಗೆ ಊರಿಗೆ ಬಂದಿದ್ದ ವಿಶಾಲ ಗಾಣಿಗ ಕುಮ್ರಗೋಡು ಗ್ರಾಮದ ಫ್ಲ್ಯಾಟ್‌ ನಲ್ಲಿ ಜು.12ರಂದು ಒಬ್ಬರೇ ಇರುವಾಗ ದುಷ್ಕರ್ಮಿಗಳು, ಕುತ್ತಿಗೆ ಬಿಗಿದು ಕೊಲೆ ಮಾಡಿ ಅವರ ಮೈಮೇಲಿದ್ದ ಚಿನ್ನಾಭರಣಗಳ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು.

ಈ ಬಗ್ಗೆ ಬಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


SHARE THIS

Author:

0 التعليقات: