Wednesday, 14 July 2021

ಕನ್ವರ್ ಯಾತ್ರೆಗೆ ಅವಕಾಶ ನೀಡಿದ ಉತ್ತರಪ್ರದೇಶ ಸರಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್


ಕನ್ವರ್ ಯಾತ್ರೆಗೆ ಅವಕಾಶ ನೀಡಿದ ಉತ್ತರಪ್ರದೇಶ ಸರಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಹೊಸದಿಲ್ಲಿ: ಕೋವಿಡ್ -19 ಭೀತಿಯ ನಡುವೆಯೂ ಮುಂದಿನ ವಾರದಿಂದ ಕನ್ವರ್ ಯಾತ್ರೆಗೆ ಅವಕಾಶ ನೀಡುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರಕಾರಕ್ಕೆ ಬುಧವಾರ ನೋಟಿಸ್ ನೀಡಿದೆ.

ನಿನ್ನೆ ರಾಜ್ಯ ಅನುಮತಿ ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ವಿಷಯವನ್ನು ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸರಕಾರದಿಂದ ಪ್ರತಿಕ್ರಿಯೆ ಕೋರಿದೆ. ಮುಂದಿನ ವಿಚಾರಣೆಯನ್ನು ಶುಕ್ರವಾರಕ್ಕೆ ನಿಗದಿಪಡಿಸಿದೆ.

ಶಿವನ ಸಾವಿರಾರು ಭಕ್ತರು ಸೇರುವ ಕನ್ವರ್ ಯಾತ್ರೆ ಯು  ಕನಿಷ್ಠ ಸಂಖ್ಯೆಯ ಜನರೊಂದಿಗೆ ನಡೆಯಬಹುದು ಹಾಗೂ  ಅಗತ್ಯವಿದ್ದರೆ ನೆಗೆಟಿವ್  ಆರ್ ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಬಹುದು ಎಂದು ಮಂಗಳವಾರ ಉತ್ತರಪ್ರದೇಶ ಸರಕಾರ ಹೇಳಿತ್ತು.

ಆದಿತ್ಯನಾಥ್ ಹೇಳಿಕೆ ನೀಡಿದ ಕೆಲವೇ ಗಂಟೆಗಳ ಬಳಿಕ ಉತ್ತರಾಖಂಡ ರಾಜ್ಯವು ತನ್ನ ಪ್ರದೇಶದಲ್ಲಿ ಕನ್ವರ್ ಯಾತ್ರೆಯನ್ನು ರದ್ದುಪಡಿಸಿದೆ.

ದೇವರು ಕೂಡ ಜನರು ಸಾಯುವುದನ್ನು ಬಯಸುವುದಿಲ್ಲ ಎಂದಿರುವ ಉತ್ತರಾಖಂಡ ದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕನ್ವರ್ ಯಾತ್ರೆಯನ್ನು ರದ್ದುಪಡಿಸುವ ನಿರ್ಧಾರ ಮಂಗಳವಾರ ಪ್ರಕಟಿಸಿದ್ದರು.


SHARE THIS

Author:

0 التعليقات: