Wednesday, 28 July 2021

ರೈತರ ಮಕ್ಕಳಿಗೆ ಶಿಷ್ಯ ವೇತನ: ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ


 ರೈತರ ಮಕ್ಕಳಿಗೆ ಶಿಷ್ಯ ವೇತನ: ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹೊಸ ಶಿಷ್ಯ ವೇತನ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದಕ್ಕಾಗಿ ಘೋಷಿಸಿರುವ ಈ ಶಿಷ್ಯ ವೇತನ ಒಂದು ಸಾವಿರ ಕೋ.ರೂ.ನ ಯೋಜನೆಯಾಗಿರುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಈಗಾಗಲೇ ಜಾರಿಯಲ್ಲಿರುವ ಸಂಧ್ಯಾ ಸುರಕ್ಷಾ ಯೋಜನೆಯ ಗೌರವಧನವನ್ನು 1,000 ಸಾವಿರ ರೂ.ನಿಂದ 1,200 ರೂ.ಗೆ ಹೆಚ್ಚಳ, ವಿಧವಾ ವೇತನ 600 ರೂ.ನಿಂದ 800 ರೂ.ಗೆ ಏರಿಕೆ ಮಾಡಲಾಗಿದೆ. ಅದೇರೀತಿ ದಿವ್ಯಾಂಗ ಚೇತನರ ವೇತನವನ್ನು 600 ರೂ.ನಿಂದ 800 ರೂ.ಗೆ ಹೆಚ್ಚಳ ಮಾಡಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ.

ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ಜು.29ರಂದು ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.


SHARE THIS

Author:

0 التعليقات: