ಬಿಎಸ್'ವೈ ಸೇರಿ ಆರು ರಾಜ್ಯಗಳ ಸಿಎಂಗಳ ಜೊತೆ ಇಂದು ಪ್ರಧಾನಿ ಮೋದಿ ಸಭೆ
ನವದೆಹಲಿ: ಕೊರೋನಾ ಪರಿಸ್ಥಿತಿ ಮತ್ತು ಲಸಿಕೆ ಹಂಚಿಕೆ, ನಿಯಂತ್ರಣದ ಕುರಿತಂತೆ ಬಿಎಸ್ ಯಡಿಯುರಪ್ಪ ಸೇರಿದಂತೆ ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಭೆ ನಡೆಸಲಿದ್ದಾರೆ.
ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಒಡಿಶಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಮೋದಿ ಸಭೆಯಲ್ಲಿ ಭಾಗಿಯಾಗಲಿದ್ದು, ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಸಭೆ ಆಯೋಜನೆಗೊಂಡಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲರೂ ಇದರಲ್ಲಿ ಭಾಗಿಯಾಗಲಿದ್ದಾರೆ. ಕಳೆದ ಕೆಲ ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತಿದ್ದು, ಕೊರೊನಾ ವೈರಸ್ ಪರಿಸ್ಥಿತಿ ಮತ್ತು ನಿಯಂತ್ರಣದ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.
0 التعليقات: