Tuesday, 6 July 2021

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ


 ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ.

ಕಳೆದ 7 ವರುಷದಿಂದ ಕರ್ನಾಟಕದ ರಾಜ್ಯಪಾಲರಾಗಿದ್ದ ವಜೂಭಾಯಿ ವಾಲಾ ಅವರ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಈಗ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

ಕೇಂದ್ರ ಸಚಿವ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿರುವ ಗೆಹ್ಲೋಟ್ ಎರಡು-ಮೂರು ದಿನದಲ್ಲಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ. ಒಟ್ಟು 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.


SHARE THIS

Author:

0 التعليقات: