Wednesday, 7 July 2021

ಶೋಭಾ ಕರಂದ್ಲಾಜೆ ಸಹಿತ ಕರ್ನಾಟಕದ ನಾಲ್ವರಿಗೆ ಸಚಿವ ಸ್ಥಾನ?


 ಶೋಭಾ ಕರಂದ್ಲಾಜೆ ಸಹಿತ ಕರ್ನಾಟಕದ ನಾಲ್ವರಿಗೆ ಸಚಿವ ಸ್ಥಾನ?

ಉಡುಪಿ: ಕೇಂದ್ರ ಸಚಿವ ಸಂಪುಟದ ಪುನರ್‌ ರಚನೆ ಇಂದು ಸಂಜೆ 6ಕ್ಕೆ ನಡೆಯಲಿದ್ದು, ರಾಜ್ಯದಿಂದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ನಾಲ್ವರಿಗೆ ಸಚಿವ ಸ್ಥಾನ ಲಭಿಸಲಿದೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.

ಶೋಭಾ ಅಲ್ಲದೆ, ಚಿತ್ರದುರ್ಗದ ಸಂಸದ ಎ.ನಾರಾಯಣಸ್ವಾಮಿ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹಾಗೂ ಬೀದರ್ ಸಂಸದ ಭಗವಂತ್ ಖೂಬಾ ಅವರು ಸಚಿವರಾಗಿ ಇಂದು ಸಂಜೆ ಕೇಂದ್ರ ಸಂಪುಟ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಸದಾಗಿ ಸಂಪುಟ ಸೇರುವ ನಿರೀಕ್ಷೆಯಲ್ಲಿರುವ ಜ್ಯೋತಿರಾದಿತ್ಯ ಸಿಂಧಿಯಾ, ನಾರಾಯಣ ರಾಣೆ ಸೇರಿದಂತೆ 24 ಮಂದಿ ಬೆಳಿಗ್ಗೆಯಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.


SHARE THIS

Author:

0 التعليقات: