Thursday, 15 July 2021

ಚಿಕ್ಕಮಗಳೂರು: ಮಹಿಳೆ ಮೇಲೆ ಆ್ಯಸಿಡ್ ದಾಳಿ ಪ್ರಕರಣ; ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಮಹಿಳೆ ಮೇಲೆ ಆ್ಯಸಿಡ್ ದಾಳಿ ಪ್ರಕರಣ; 
ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: 2015ರಲ್ಲಿ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದ ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಮಹಿಳೆ ಮೇಲೆ ಆ್ಯಸಿಡ್ ದಾಳಿ ಪ್ರಕರಣದ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 20 ಲಕ್ಷ ರೂ. ದಂಡ ವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.

2015ರ ಎ. 18 ರಂದು ಮಹಿಳೆ ಎಂದಿನಂತೆ ಬ್ಯೂಟಿ ಪಾರ್ಲರ್ ಕೆಲಸ ಮುಗಿಸಿ ಮನೆಗೆ ತೆರಳಿ ಮನೆಯ ಮುಂಭಾಗದ ಗೇಟ್ ತೆಗೆಯುತ್ತಿದ್ದಾಗ ಆರೋಪಿಗಳಾದ ಗಣೇಶ್, ಕಬೀರ್, ವಿನೋದ್, ಅಬ್ದುಲ್ ಮಜೀದ್ ಎಂಬವರು ಮಹಿಳೆಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದರು.

ಶೃಂಗೇರಿ ಪೊಲೀಸ್ ಠಾಣೆಯ ಅಂದಿನ ಠಾಣಾಧಿಕಾರಿ ಸುಧೀರ್ ಹೆಗ್ಡೆ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಘಟನೆ ನಡೆದ 24 ಗಂಟೆ ಯಲ್ಲಿ ಆರೋಪಿಗಳನ್ನು ಬಂಧಿಸಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ಸಂತ್ರಸ್ತೆಯ ಪರ ಸರ್ಕಾರಿ ಅಭಿಯೋಜಕರಾದ ಮಮತ ಬಿ.ಎಸ್. ಅವರು ವಾದ ಮಂಡಿಸಿದ್ದರು.



SHARE THIS

Author:

0 التعليقات: