ಭಟ್ಕಳ: ಲಾರಿ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಭಟ್ಕಳ: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ತಾಲೂಕು ಪಂಚಾಯತ್ ಕಾರ್ಯಾಲಯದ ಎದುರ ರವಿವಾರ ನಡೆದಿದೆ.
ಜಾಮಿಯಾಬಾದ್ ರಸ್ತೆಯ ಮದೀನಾ ಕಾಲನಿಯ ಅಬ್ದುಲ್ ಖಾದಿರ್ ಇಶ್ತಿಯಾಕ್ (44) ಮೃತರು ಎಂದು ಗುರುತಿಸಲಾಗಿದೆ.
ಅಪಘಾತದಿಂದ ಗಂಭೀರವಾಗಿ ಗಾಯಗೊಂಡ ಅಬ್ದುಲ್ ಖಾದಿರ್ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
0 التعليقات: