Sunday, 11 July 2021

ಕಟ್ಟಡ ಕಾರ್ಮಿಕರಿಗೆ ಸಿಹಿಸುದ್ದಿ : `ಕೆಎಸ್ ಆರ್ ಟಿಸಿ' ಯಿಂದ ಉಚಿತ ಬಸ್ ಪಾಸ್ ವಿತರಣೆಗೆ ತೀರ್ಮಾನ


ಕಟ್ಟಡ ಕಾರ್ಮಿಕರಿಗೆ ಸಿಹಿಸುದ್ದಿ : `ಕೆಎಸ್ ಆರ್ ಟಿಸಿ' ಯಿಂದ ಉಚಿತ ಬಸ್ ಪಾಸ್ ವಿತರಣೆಗೆ ತೀರ್ಮಾನ

ಚಿತ್ರದುರ್ಗ : ಕಟ್ಟಡ ಕಾರ್ಮಿಕರಿಗೆ ಕೆಎಸ್ ಆರ್ ಟಿಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ 23 ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಕೆಎಸ್ ಆರ್ ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದ್ದಾರೆ.

ಹೊಳಲ್ಕೆರೆ ಪಟ್ಟಣದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ್ದ ಆಹಾರ ಕಿಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ 23 ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲು ನಿರ್ಧರಿಸಲಾಗಿದ್ದು, ಇನ್ನು 2,3 ತಿಂಗಳಲ್ಲಿ ಬಸ್ ಪಾಸ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ : ಸಂಸದೆ ಸುಮಲತಾಗೆ ರಾಜ್ಯ ರೈತಸಂಘದಿಂದ ಬೆಂಬಲ

ಉಚಿತ ಬಸ್ ಪಾಸ್ ಮೂಲಕ ಕಟ್ಟಡ ಕಾರ್ಮಿಕರು ಬೇರೆ ಕಡೆ ಕೆಲಸಕ್ಕೆ ಹೋಗುವಾಗ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದ ಹೇಳಿದ್ದಾರೆ. ಈ ಮೂಲಕ ಕಟ್ಟಡ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
SHARE THIS

Author:

0 التعليقات: