Friday, 9 July 2021

ವಾಯುಭಾರ ಕುಸಿತ ಪರಿಣಾಮ ನಾಳೆಯಿಂದ ಭಾರಿ ಮಳೆ ಸಾಧ್ಯತೆ


ವಾಯುಭಾರ ಕುಸಿತ ಪರಿಣಾಮ ನಾಳೆಯಿಂದ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಜುಲೈ 11, 12 ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದರ ಪರಿಣಾಮ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಹಾಗೂ ಕರಾವಳಿಯ ಜಿಲ್ಲೆಗಳಲ್ಲಿ ಜುಲೈ 13ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಬಹುದು. ಜುಲೈ 11 ಮತ್ತು 12 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜುಲೈ 10, 13 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ, ಯಾದಗಿರಿ, ಧಾರವಾಡ, ಬೆಳಗಾವಿ ರಾಯಚೂರು ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದ್ದು ಜುಲೈ 13 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


SHARE THIS

Author:

0 التعليقات: