ಅಧಿಕವಾಗುತ್ತಿರುವ ಜನಸಂಖ್ಯೆಯಿಂದ ಅಭಿವೃದ್ಧಿಗೆ ತೊಂದರೆಯಾಗುತ್ತಿದೆ, ನಿಯಂತ್ರಣ ಕ್ರಮ ಅಗತ್ಯ: ಆದಿತ್ಯನಾಥ್
ಲಕ್ನೋ: ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ಅಭಿವೃದ್ಧಿಗೆ ತೊಡಕಾಗುತ್ತಿದೆ. ಜನಸಂಖ್ಯೆಯನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ತಿಳಿಸಿದ್ದಾರೆ. ತಮ್ಮ ಅಧಿಕೃತ ನಿವಾಸದಲ್ಲಿ ವಿಶ್ವ ಜನಸಂಖ್ಯಾ ದಿನದಂದು ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಉತ್ತರ ಪ್ರದೇಶ ಜನಸಂಖ್ಯಾ ನೀತಿಯನ್ನು 2021-2030ರ ಅನಾವರಣಗೊಳಿಸಿದ ಆದಿತ್ಯನಾಥ್, "ಪ್ರಪಂಚದಾದ್ಯಂತ, ಕಾಲಕಾಲಕ್ಕೆ, ಹೆಚ್ಚುತ್ತಿರುವ ಜನಸಂಖ್ಯೆಯು ಅಭಿವೃದ್ಧಿಗೆ ಅಡ್ಡಿಯಾಗಬಹುದು ಎಂಬ ಕಳವಳವನ್ನು ವ್ಯಕ್ತಪಡಿಸಲಾಗಿದೆ ಮತ್ತು ಕಳೆದ ನಾಲ್ಕು ದಶಕಗಳಿಂದ ಅದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ. "
"ಈ ದಿಕ್ಕಿನಲ್ಲಿ ಪ್ರಯತ್ನಗಳನ್ನು ಮಾಡಿದ ದೇಶಗಳು ಮತ್ತು ರಾಜ್ಯಗಳು ಸಕಾರಾತ್ಮಕ ಫಲಿತಾಂಶಗಳನ್ನು ಕಂಡಿವೆ. ಆದಾಗ್ಯೂ, ಈ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನಗಳು ಬೇಕಾಗುತ್ತವೆ" ಎಂದು ಅವರು ಹೇಳಿದರು. ಉತ್ತರಪ್ರದೇಶ ಸರ್ಕಾರವು ಸಮಾಜದ ಎಲ್ಲಾ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಈ ನೀತಿಯನ್ನು ಜಾರಿಗೆ ತರುತ್ತಿದೆ" ಎಂದು ಅವರು ಹೇಳಿದರು.
0 التعليقات: