Tuesday, 13 July 2021

ಈ ತಿಂಗಳ ಅಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ!


ಈ ತಿಂಗಳ ಅಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ!

ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ವಾಹನ ಸವಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಮಾಸಾಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸ್ಥಿರತೆ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಮಾಸಾಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ದೇಶದಲ್ಲಿ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದ್ದು, ಈ ತಿಂಗಳ ಅಂತ್ಯಕ್ಕೆ ಇಳಿಕೆಯಾಗುವ ಸಾಧ್ಯತೆ ಇದೆ.

ಪ್ರತಿ ಬ್ಯಾರೆಲ್ ನ ಬ್ರೆಂಟ್ ಕಚ್ಚಾತೈಲ ದರವು 77 ಡಾಲರ್ ಗೆ ಏರಿಕೆಯಾಗಿತ್ತು. ಆದರೆ ಇದೀಗ 75 ಡಾಲರ್ ಗೆಇಳಿಕೆಯಾಗಿದ್ದು, ಈ ದರದಲ್ಲೇ ಸ್ಥಿರತೆ ಕಾಯ್ದುಕೊಂಡರೆ ಈ ತಿಂಗಳ ಅಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.SHARE THIS

Author:

0 التعليقات: