Thursday, 8 July 2021

ಲಂಚ ಪಡೆದ ಆರೋಪ: ಯಡಿಯೂರಪ್ಪರ ವಿರುದ್ಧದ ಖಾಸಗಿ ದೂರು ವಜಾ


ಲಂಚ ಪಡೆದ ಆರೋಪ: ಯಡಿಯೂರಪ್ಪರ ವಿರುದ್ಧದ ಖಾಸಗಿ ದೂರು ವಜಾ

ಬೆಂಗಳೂರು: ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.

ಖಾಸಗಿ‌ ಕಂಪನಿಯೊಂದರಿಂದ 12 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ, ಅಳಿಯ ಸಂಜಯ್ ಸೇರಿ 9 ಮಂದಿಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.‌ಅಬ್ರಹಾಂ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಯಂತ್ ಕುಮಾರ್ ಅವರು ಕಾಯ್ದಿರಿಸಿದ್ದ ಆದೇಶವನ್ನು ಗುರುವಾರ ಪ್ರಕಟಿಸಿದ್ದಾರೆ‌.

ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೂ ಅಬ್ರಹಾಂ ಮನವಿ ಸಲ್ಲಿಸಿದ್ದರು. ಆದರೆ ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರು‌. ಈ ಹಿನ್ನೆಲೆಯಲ್ಲಿ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.


SHARE THIS

Author:

0 التعليقات: