ಕಾಸರಗೋಡು: ಯುವತಿ ಆತ್ಮಹತ್ಯೆ
ಕಾಸರಗೋಡು: ಯುವತಿಯೊಬ್ಬಳು ಕುತ್ತಿಗೆಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬುಧವಾರ ಬೆಳಗ್ಗೆ ನಗರ ಠಾಣಾ ವ್ಯಾಪ್ತಿಯ ಕಸಬಾದಿಂದ ವರದಿಯಾಗಿದೆ.
ಕಸಬಾ ತೀರದ ಅಶೋಕನ್ - ಪುಷ್ಪಾ ದಂಪತಿ ಪುತ್ರಿ ಅಶ್ವತಿ (19) ಮೃತಪಟ್ಟವರು. ಮನೆಯ ಕೋಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ.
ಪೊಲೀಸರು ಮಹಜರು ನಡೆಸಿ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ದಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟುಕೊಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
0 التعليقات: