Monday, 12 July 2021

ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ : ಸಿದ್ದರಾಮಯ್ಯ


 ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ : ಸಿದ್ದರಾಮಯ್ಯ

ಬಾಗಲಕೋಟೆ : 'ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇವರಿಗೆ ಮಾನ, ಮರ್ಯಾದೆ, ನಾಚಿಕೆ ಇಲ್ಲ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದ್ದಾರೆ‌.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸರ್ಕಾರಕ್ಕೆ ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಲು ಅನುಕೂಲ ಮಾಡಿಕೊಟ್ಟಿದೆ. ಈ ಸಂದರ್ಭದಲ್ಲಿ ವಿಪಕ್ಷಗಳು ವಿರೋಧ ಮಾಡುವುದು, ಪ್ರತಿಭಟನೆ ಮಾಡಲು ಆಗುವು ದಿಲ್ಲ ಎಂಬುದು ಗೊತ್ತಿದೆ. ಹೀಗಾಗಿಯೇ ಅವರು ಆಡಿದ್ದೆ ಆಟ ಆಗಿದೆ ಎಂದು ಟೀಕಿಸಿದರು.

'ಮಂಡ್ಯ ಸಂಸದೆ ಸುಮಲತಾ, ಕುಮಾರಸ್ವಾಮಿ ಅವರ ಪುತ್ರನನ್ನು ಸೋಲಿಸಿದಕ್ಕೆ ಎಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ. ಸುಮಲತಾ ಕೆಆರ್ ಎಸ್ ಡ್ಯಾಮ್ ಬಿರುಕು ಬಿಟ್ಟಿದೆ. ಕೆಆರ್ ಎಸ್ ಸುತ್ತಮುತ್ತಲಿನ 20 ಕಿ.ಮೀ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ, ಇದರಲ್ಲಿ ಜೆಡಿಎಸ್ ನಾಯಕರ ಗಣಿ ಕಂಪೆನಿಗಳಿವೆ ಎಂದು ಆರೋಪ ಮಾಡಿದ್ದಾರೆ. ಆದರೆ ಈ ಬಗ್ಗೆ ಸರ್ಕಾರ, ಗಣಿ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಬೇಕಿತ್ತು. ಆದರೆ ಸರ್ಕಾರ ಸುಮ್ಮನೆ ಇರುವುದನ್ನು ನೋಡಿದ್ರೆ ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿದೆ ಎಂಬ ಸಂಶಯಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.

ಬಾದಾಮಿಯಿಂದಲೇ ಸ್ಪರ್ಧೆ: 

ನನಗೆ ಈಗಾಗಲೇ ಹಲವಾರು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಆಹ್ವಾನ ಬಂದಿರುವುದು ನಿಜ. ಆದರೆ, ನಾನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುವೆ ಎಂದು ಸಿದ್ದರಾಮಯ್ಯ ಸ್ಪಷ್ಟಣೆ ನೀಡಿದರು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಉಪ ಚುನಾವಣೆಗೆ ದಿನಾಂಕ ಘೋಷಣೆಯಾದ ನಂತರ ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಜಾತಿ ಸಮೀಕ್ಷೆ ನಡೆದು ಎರಡೂವರೆ ವರ್ಷ ಆಯ್ತು‌. ಅದರ ವರದಿಯನ್ನು ಸಲ್ಲಿಕೆ ಮಾಡಲಾಗಿದೆ ‌ ಆ ಕುರಿತು ಸದನದಲ್ಲಿ ಚರ್ಚೆ ಆಗುತ್ತಿಲ್ಲ. ಚರ್ಚೆ ಮಾಡಿದ್ರೆ ಸಾಮಾಜಿಕ ನ್ಯಾಯ ಒದಗಿಸಬೇಕಾಗುತ್ತದೆ‌ ಹೀಗಾಗಿ ಸರ್ಕಾರ ಈ ಬಗ್ಗೆ ಚರ್ಚೆ ನಡೆಸುತ್ತಿಲ್ಲ ಎಂದರು.

SHARE THIS

Author:

0 التعليقات: