Thursday, 8 July 2021

ಆಕ್ಸಿಜನ್‌ ಸ್ಥಿತಿಗತಿ ಕುರಿತು ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ


 ಆಕ್ಸಿಜನ್‌ ಸ್ಥಿತಿಗತಿ ಕುರಿತು ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ನವದೆಹಲಿ: ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ಪೂರೈಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ 'ಉನ್ನತ ಮಟ್ಟ'ದ ಅಧಿಕಾರಿಗಳು, ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಏಪ್ರಿಲ್-ಮೇ ತಿಂಗಳಲ್ಲಿ ಕೋವಿಡ್‌-19 ಎರಡನೇ ಅಲೆ ತೀವ್ರವಾದಾಗ, ದೇಶದ ವಿವಿಧ ಭಾಗಗಳಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಇರುವುದಾಗಿ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ ಮತ್ತು ಪೂರೈಕೆ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿದೆ.

ಈಗ ಕೋವಿಡ್‌-19 ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು, ಮುಂದೆ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಅರಿಯುವುದಕ್ಕಾಗಿ ಉನ್ನತ ಮಟ್ಟದ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.


SHARE THIS

Author:

0 التعليقات: