Thursday, 15 July 2021

ದ.ಕ. ಜಿಲ್ಲಾ ನಗರಾಭಿವೃದ್ಧಿ ಘಟಕದ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆಗೆ ಎಸಿಬಿ ದಾಳಿ


 ದ.ಕ. ಜಿಲ್ಲಾ ನಗರಾಭಿವೃದ್ಧಿ ಘಟಕದ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆಗೆ ಎಸಿಬಿ ದಾಳಿ

ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಜಿಲ್ಲಾ ನಗರಾಭಿವೃದ್ಧಿ ಘಟಕದ ಎಕ್ಸಿಕ್ಯೂಟಿವ್ ಇಂಜಿನಿಯರ್ ಜಿ. ಶ್ರೀಧರ್ ಅವರ ಮನೆ ಹಾಗೂ ಕಚೇರಿಗೆ ಎಸಿಬಿ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ರಾಜ್ಯದ ಒಂಬತ್ತು ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ, ಕಚೇರಿಗೆ ಎಸಿಬಿ ಅಧಿಕಾರಿಗಳು ದಾಳಿ‌ ನಡೆಸಿದ್ದಾರೆ‌. ಈ ಕಾರ್ಯಾಚರಣೆಯ ಭಾಗವಾಗಿ ಮಂಗಳೂರಲ್ಲೂ ಎಸಿಬಿ ದಾಳಿ‌‌ ನಡೆದಿದೆ.

ಮಂಗಳೂರಿನಲ್ಲಿ ಜಿ. ಶ್ರೀಧರ್ ಅವರಿಗೆ ಸೇರಿದ ಮನೆ ಹಾಗೂ ಜಿಲ್ಲಾಧಿಕಾರಿ ಕಚೇರಿಯ ನಗರಾಭಿವೃದ್ಧಿ ಘಟಕಕ್ಕೆ ದಾಳಿ‌ ನಡೆಸಿದ ಅಧಿಕಾರಿ ಗಳು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದು, ಎಸಿಬಿ ಅಧಿಕಾರಿಗಳು ಜಿ. ಶ್ರೀಧರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಎಸಿಬಿ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


SHARE THIS

Author:

0 التعليقات: