Wednesday, 28 July 2021

ಬೆಂಗಳೂರು: ಮಹಿಳಾ ಕಾನ್‍ಸ್ಟೇಬಲ್ ಆತ್ಮಹತ್ಯೆ.

ಬೆಂಗಳೂರು: ಮಹಿಳಾ ಕಾನ್‍ಸ್ಟೇಬಲ್ ಆತ್ಮಹತ್ಯೆ.

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಾನ್‍ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಹಿಳಾ ಕಾನ್‍ಸ್ಟೇಬಲ್ ನೇತ್ರಾ(27) ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಾನ್‍ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಪೀಣ್ಯ ಸಂಚಾರ ಠಾಣೆಯ ಕಾನ್‍ ಸ್ಟೇಬಲ್ ಮಂಜುನಾಥ್ ಜೊತೆ ಇವರ ವಿವಾಹ ಆಗಿತ್ತು. 

ಮೂಲತಃ ಇಬ್ಬರೂ ಕೂಡ ತುಮಕೂರು ಜಿಲ್ಲೆಯವರಾಗಿದ್ದು, ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದರು. ಬೆಂಗಳೂರಿನ ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ವಾಸವಾಗಿದ್ದರು. ನಿನ್ನೆ ಅಡುಗೆ ಮಾಡುವ ವಿಷಯವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.SHARE THIS

Author:

0 التعليقات: