Monday, 5 July 2021

ದ್ವಿತೀಯ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳೂ ಪಾಸ್: ಹೈಕೋರ್ಟ್ ಗೆ ಸರಕಾರ ಹೇಳಿಕೆ


 ದ್ವಿತೀಯ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳೂ ಪಾಸ್: ಹೈಕೋರ್ಟ್ ಗೆ ಸರಕಾರ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ಪಾಸ್ ಮಾಡುವುದಾಗಿ ಹೈಕೋಟ್೯ ಗೆ ರಾಜ್ಯ ಸರಕಾರ ಹೇಳಿಕೆ ನೀಡಿದೆ.

ಈ ಕುರಿತು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ಹೈಕೋಟ್೯ ನ್ಯಾಯಪೀಠಕ್ಕೆ ರಾಜ್ಯ ಸರಕಾರ ತನ್ನ ಈ ಹೇಳಿಕೆಯನ್ನು ಸಲ್ಲಿಸಿದೆ.

ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಪಡಿಸಿ ಸರಕಾರ ಆದೇಶ ಹೊರಡಿಸಿತ್ತು. ಅದರೆ, ಪಿಯುಸಿ ರಿಪೀಟರ್ಸ್ವಿ ದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಾಗಿ ತಿಳಿಸಿತ್ತು. ಇದನ್ನು ಪ್ರಶ್ನಿಸಿ ರಿಪೀಟರ್ಸ್ ವಿದ್ಯಾರ್ಥಿಗಳು ಹೈಕೋಟ್೯ ಮೆಟ್ಟಲೇರಿದ್ದರು.


SHARE THIS

Author:

0 التعليقات: