ಕಾಸರಗೋಡು: ಪತಿಯ ಹೊಡೆತಕ್ಕೆ ಪತ್ನಿ ಮೃತ್ಯು
ಕಾಸರಗೋಡು: ಪತಿಯ ಹೊಡೆತಕ್ಕೆ ಪತ್ನಿ ಮೃತಪಟ್ಟ ದಾರುಣ ಘಟನೆ ಬೇಡಡ್ಕದಲ್ಲಿ ಸೋಮವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಬೇಡಡ್ಕ ಕೊರತ್ತಿಕುಂಡು ಕಾಲನಿಯ ಸ್ಮಿತಾ(23) ಮೃತಪಟ್ಟವರು. ಇವರ ಪತಿ ಅರುಣ್ ಕುಮಾರ್ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಮಿತಾರಿಗೆ ಸೋಮವಾರ ರಾತ್ರಿ ಅರುಣ್ ಕುಮಾರ್ ಹಲ್ಲೆ ನಡೆಸಿದ್ದಾನೆ. ಈ ವೇಳೆ ಬೊಬ್ಬೆ ಕೇಳಿ ಪರಿಸರವಾಸಿಗಳು ಸ್ಥಳಕ್ಕೆ ಧಾವಿಸಿದಾಗ ಹಲ್ಲೆಗೊಳಗಾದ ಸ್ಮಿತಾ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದರು. ತಕ್ಷಣ ಸ್ಮಿತಾರನ್ನು ಸ್ಥಳೀಯರು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬೇಡಡ್ಕ ಠಾಣಾ ಪೊಲೀಸರು ಸ್ಥಳಕ್ಕಾಮಿಸಿ ತನಿಖೆ ನಡೆಸುತ್ತಿದ್ದು, ಅರುಣ್ ಕುಮಾರ್ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.
ಸ್ಮಿತಾ ಅವರ ಮೃತದೇಹವನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
0 التعليقات: