Sunday, 15 August 2021

ತಾಲಿಬಾನ್ ಬಿಗಿ ಹಿಡಿತದಲ್ಲಿ ಅಫ್ಘಾನಿಸ್ತಾನ : 129 ಭಾರತೀಯರು ಕಾಬೂಲ್ ನಿಂದ ತವರಿಗೆ ಆಗಮನ


ತಾಲಿಬಾನ್ ಬಿಗಿ ಹಿಡಿತದಲ್ಲಿ ಅಫ್ಘಾನಿಸ್ತಾನ : 
129 ಭಾರತೀಯರು ಕಾಬೂಲ್ ನಿಂದ ತವರಿಗೆ ಆಗಮನ

ನವದೆಹಲಿ : ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶ ಪಡಿಸಿಕೊಂಡಿದ್ದು, ಇದರ ಬೆನ್ನಲ್ಲೇ 129 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ವಿಮಾನ ಕಾಬೂಲ್​ನಿಂದ ದೆಹಲಿಗೆ ಬಂದಿಳಿದಿದೆ.

ಅಫ್ಘಾನಿಸ್ತಾನದಲ್ಲಿ ಅಸ್ಥಿರ ಪರಿಸ್ಥಿತಿ ನಿರ್ಮಾಣವಾಗಿದ್ದು ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ದೇಶ ತೊರೆದು ನೆರೆಯ ತಜಕಿಸ್ತಾನಕ್ಕೆ ತೆರಳಿದ್ದಾರೆ. ಭಾರತೀಯರ ರಕ್ಷಣೆಗಾಗಿ ಭಾರತ ಸರ್ಕಾರ ಕ್ರಮ ಕೈಗೊಂಡಿದ್ದು ಕಾಬುಲ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿಗಳನ್ನು ಭಾರತಕ್ಕೆ ಕರೆಸಿಕೊಳ್ಳಲು ಭಾರತ ಗಂಭೀರ ಚಿಂತನೆ ನಡೆಸಿದೆ.

ಈಗಾಗಲೇ ಏರ್ ಇಂಡಿಯಾ ವಿಮಾನದ ಮೂಲಕ ಭಾರತೀಯರನ್ನು ರಕ್ಷಿಸುವ ಕಾರ್ಯ ಆರಂಭಗೊಂಡಿದ್ದು, ಮೊದಲ ಹಂತದ 129 ಜನರ ತಂಡ ಭಾರತಕ್ಕೆ ಬಂದಿಳಿದಿದೆ. ಇದಲ್ಲದೆ ಭಾರತೀಯ ವಾಯುಪಡೆಯ ಸಿ -17 ಗ್ಲೋಬ್‌ಮಾಸ್ಟರ್ ಮಿಲಿಟರಿ ಟ್ರಾನ್ಸ್‌ಪೋರ್ಟ್ ವಿಮಾನಗಳನ್ನು ಸ್ಥಳಾಂತರಿಸುವ ಕಾರ್ಯಾಚರಣೆ ನಡೆಯಲಿದೆ.

ಇದಲ್ಲದೆ, ಕೆನಡಾ ಮತ್ತು ಸ್ವೀಡನ್ ಕೂಡ ತಮ್ಮ ಸಿಬ್ಬಂದಿಯನ್ನು ಕಾಬೂಲ್‌ನಲ್ಲಿರುವ ರಾಯಭಾರ ಕಚೇರಿಯಿಂದ ಹಿಂತೆಗೆದುಕೊಳ್ಳಲು ಸಜ್ಜಾಗಿವೆ.SHARE THIS

Author:

0 التعليقات: