ಇಂದಿನಿಂದ ಆಗಸ್ಟ್ 15 ರವರೆಗೆ ಭಾರೀ ಮಳೆ :
ಹಲವು ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಣೆ
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಇಂದಿನಿಂದ ಆಗಸ್ಟ್ 15 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಇಂದು ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲೂ ಈ ವಾರ ಮಳೆಯ ಆರ್ಭಟ ಹೆಚ್ಚಾಗಲಿದೆ. ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
0 التعليقات: