Saturday, 14 August 2021

ಹಿಮಾಚಲ ಪ್ರದೇಶದಲ್ಲಿ ಭೂ ಕುಸಿತ : ಮೃತಪಟ್ಟವರ ಸಂಖ್ಯೆ 23 ಕ್ಕೆ ಏರಿಕೆ


ಹಿಮಾಚಲ ಪ್ರದೇಶದಲ್ಲಿ ಭೂ ಕುಸಿತ : ಮೃತಪಟ್ಟವರ ಸಂಖ್ಯೆ 23 ಕ್ಕೆ ಏರಿಕೆ

ಶಿಮ್ಲಾ : ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 23 ಕ್ಕೆ ಏರಿಕೆಯಾಗಿದೆ.

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸತತ ನಾಲ್ಕನೇ ದಿನ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇಂದು ಆರು ಶವಗಳು ಪತ್ತೆಯಾಗಿದ್ದು, ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 23ಕ್ಕೆ ಏರಿಕೆಯಾಗಿರುವುದಾಗಿ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಘಟಕದ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಮಾಹಿತಿ ನೀಡಿದ್ದಾರೆ.

ಬುಧವಾರ ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, 35 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ.

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಪಿಎಂಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ವನ್ನು ಘೋಷಿಸಿದೆ. ಗಾಯಗೊಂಡವರಿಗೆ ರೂ. 50,000 ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.SHARE THIS

Author:

0 التعليقات: