Monday, 2 August 2021

ಕೊರೊನಾ 3 ನೇ ಅಲೆ ಭೀತಿ : ಮತ್ತೆ `ವೀಕೆಂಡ್ ಕರ್ಪ್ಯೂ' ಜಾರಿ


ಕೊರೊನಾ 3 ನೇ ಅಲೆ ಭೀತಿ : ಮತ್ತೆ `ವೀಕೆಂಡ್ ಕರ್ಪ್ಯೂ' ಜಾರಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ 3 ನೇ ಅಲೆ ಆತಂಕ ಎದುರಾಗಿದ್ದು, ಬೆಂಗಳೂರಿನಲ್ಲಿ ಮತ್ತೆ ವಿಕೆಂಡ್ ಕರ್ಪ್ಯೂ ಜಾರಿಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಕೊರೊನಾ 3 ನೇ ಅಲೆ ಆತಂಕ ಎದುರಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಬಿಬಿಎಂಪಿ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಪ್ರಯತ್ನಿಸುತ್ತಿದೆ. ಕೇರಳ-ಮಹಾರಾಷ್ಟ್ರದಿಂದ ಬರುವವರಿಗೆ ಕಡ್ಡಾಯವಾಗಿ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯ ಮಾಡಲು ಸಿದ್ದತೆ ಮಾಡಲು ನಿರ್ಧರಿಸಲಾಗಿದೆ.

ಕೊರೊನಾ ವೈರಸ್ ನಿಯಂತ್ರಣಕ್ಕೆ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ಗೆ ಬಿಬಿಎಂಪಿ ಸಾಕಷ್ಟು ಒಲವು ಹೊಂದಿದ್ದು, ಅನ್ ಲಾಕ್ ಬೆನ್ನಲ್ಲೇ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಪ್ಯೂ ಮಾಡೋದು ಉತ್ತಮ ಎಂದು ಬಿಬಿಎಂಪಿ ಚಿಂತನೆ ಮಾಡುತ್ತಿದೆ ಎನ್ನಲಾಗಿದೆ.

ನವದೆಹಲಿ : ಸಾಲಮನ್ನಾದ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದ್ದು, ದೇಶದ ರೈತರ ಸಾಲಮನ್ನಾ ಮಾಡುವ ಪ್ರಸ್ತಾವ ತನ್ನ ಪರಿಶೀಲನೆಯಲ್ಲಿ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

2008 ರಲ್ಲಿ ಕೇಂದ್ರ ಸರ್ಕಾರ ಸಾಲಮನ್ನಾ ಯೋಜನೆ ಜಾರಿಗೊಳಿಸಿತ್ತು. ಅದಾದ ನಂತರ ಅಂತಹ ಯೋಜನೆಯನ್ನು ಅನುಷ್ಠಾನಗೊಳಿಸಲ್ಲ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಭಗವಂತ ಕಾರಡ್ ಅವರು ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

3 ಲಕ್ಷ ರೂ. ವರೆಗಿನ ಅಲ್ಪಾವಧಿ ಬೆಳೆ ಸಾಲಕ್ಕೆ ಬಡ್ಡಿ ರಿಯಾಯಿತಿ ನೀಡಡಲಾಗುತ್ತಿದೆ. ಖಾತ್ರಿ ರಹಿತ ಸಾಲಕ್ಕೆ ಬಡ್ಡಿ ರಿಯಾಯಿತಿ ನೀಡಲಾಗುತ್ತಿದೆ. ಖಾತ್ರಿ ರಹಿತ ಸಾಲದ ಮಿತಿಯನ್ನು 1 ರಿಂದ 1.6 ಲಕ್ಷ ರೂ.ಗೆ ರಿಸರ್ವ್ ಬ್ಯಾಂಕ್ ಹೆಚ್ಚಳ ಮಾಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಪ್ರತಿ ವರ್ಷ 6 ಸಾವಿರ ರೂ. ನಗದನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.SHARE THIS

Author:

0 التعليقات: