ಸಿಲಿಕಾನ್ ಸಿಟಿ
ಆ.30 ರವರೆಗೆ ನೈಟ್ ಕರ್ಪ್ಯೂ ವಿಸ್ತರಣೆ
-ಕಮಲ್ ಪಂತ್
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳವಾಗುತ್ತಿದೆ, ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆ ಬೆಂಗಳೂರಿನಲ್ಲಿ ಆಗಸ್ಟ್ 30 ರವರೆಗೆ ನೈಟ್ ಕರ್ಪ್ಯೂ ವಿಸ್ತರಿಸಲಾಗಿದೆ.
ಈ ಕುರಿತು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದು, ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆ ಕೊರೊನಾ ಸೋಂಕಿನ ಪ್ರಕರಣಗಳಿಗೆ ಕಡಿವಾಣ ಹಾಕಲು ಬೆಂಗಳೂರಿನಲ್ಲಿ ಆಗಸ್ಟ್ 30 ರವರೆಗೆ ನೈಟ್ ಕರ್ಪ್ಯೂ ವಿಸ್ತರಿಸಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಪ್ಯೂ ಆದೇಶ ಜಾರಿಯಲ್ಲಿರಲಿದೆ.
ಇನ್ನೂ, ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಮೂರು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿದ್ದರೇ, 12 ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಕೇಸ್ ಪತ್ತೆಯಾಗಿವೆ. ಇಂದು 1,298 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದರೇ, 32 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಮೂರು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿದ್ದರೇ, 12 ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಕೇಸ್ ಪತ್ತೆಯಾಗಿವೆ. ಇಂದು 1,298 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದರೇ, 32 ಸೋಂಕಿತರು ಸಾವನ್ನಪ್ಪಿದ್ದಾರೆ.
0 التعليقات: