Wednesday, 11 August 2021

ರಾಜ್ಯದಲ್ಲಿ ಹನಿ ನೀರಾವರಿಗೆ 300 ಕೋಟಿ ರೂ. ಬಿಡುಗಡೆ

ರಾಜ್ಯದಲ್ಲಿ ಹನಿ ನೀರಾವರಿಗೆ 300 ಕೋಟಿ ರೂ. ಬಿಡುಗಡೆ

ಉಡುಪಿ: ರಾಜ್ಯದ ರೈತರು ಹನಿ ನೀರಾವರಿಯಲ್ಲಿ ತೊಡಗಿಸಿಕೊಳ್ಳುವಂತೆ ಉತ್ತೇಜನ ನೀಡಲು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಯಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ 300 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಇಂದು ಬಿಡುಗಡೆಗೊಳಿಸಿದ ಪತ್ರಿಕಾ ಹೇಳಿಕೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಶೋಭಾ ಕರಂದ್ಲಾಜೆ, ಈ 300 ಕೋಟಿ ಅನುದಾನದಲ್ಲಿ 21 ಕೋಟಿ ಅನುದಾನವನ್ನು ಬುಡಕಟ್ಟು ಪ್ರದೇಶದ ಉಪ ಯೋಜನೆ, 51 ಕೋಟಿ ರೂ. ಅನುದಾನವನ್ನು ಪರಿಶಿಷ್ಟ ವರ್ಗಕ್ಕೆ ವಿಶೇಷ ಘಟಕ ಯೋಜನೆ ಮತ್ತು ಸಾಮಾನ್ಯ ವರ್ಗ (ಜನರಲ್ ಕೆಟಗರಿ) ಅಡಿಯಲ್ಲಿ 228 ಕೋಟಿ ರೂ. ಅನುದಾನವನ್ನು ವಿಂಗಡಿಸಿ ಹಂಚಿಕೆ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.

2021-22ನೇ ಸಾಲಿನ ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳಿಗೆ ಸೇರಿ ಒಟ್ಟು 4000 ಕೋಟಿ ರೂ. ಅನುದಾನವನ್ನು ಈ ಯೋಜನೆಯಡಿಯಲ್ಲಿ ಕೇಂದ್ರ ಸರಕಾರ ಮೀಸಲಿರಿಸಿದೆ. ಈ ಮೊತ್ತದಲ್ಲಿ ಕರ್ನಾಟಕ ರಾಜ್ಯಕ್ಕೆ 500 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಇದರಲ್ಲಿ ಮೊದಲ ಹಂತದಲ್ಲಿ 300 ಕೋಟಿ ರೂ. ಅನುದಾನವನ್ನು ಕೇಂದ್ರ ಸರಕಾರ ಕರ್ನಾಟಕ ರಾಜ್ಯಕ್ಕೆ ಬಿಡುಗಡೆ ಮಾಡಿದೆ ಎಂದೂ ಸಚಿವೆ ಶೋಭಾ ವಿವರಿಸಿದರು.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಕೇಂದ್ರ ಪ್ರಾಯೋಜಿತ ಮಹತ್ವದ ಯೋಜನೆಯಾಗಿದ್ದು, 2015-16ರಿಂದ ಜಾರಿಯಲ್ಲಿದೆ. ಶೇ. 60:40ರ ಅನುಪಾತದಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಅನುದಾನವನ್ನು ಹಂಚಿಕೆ ಮಾಡುತ್ತಿದ್ದು, ಈಶಾನ್ಯ ಮತ್ತು ಹಿಮಾಲಯ ರಾಜ್ಯಗಳಿಗೆ ಕೇಂದ್ರ ಶೇ.90 ಹಾಗೂ ರಾಜ್ಯಗಳು ಶೇ.10ರ ಅನುಪಾತದಲ್ಲಿ ಅನುದಾನವನ್ನು ಹಂಚಿಕೆ ಮಾಡಲಾಗುತ್ತದೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರಕಾರ ಶೇ.100ರಷ್ಟು ಅನುದಾನವನ್ನು ನೀಡುತ್ತಿದೆಯೆಂದು ಶೋಭಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಲ್ಲಿಯವರೆಗೆ ದೇಶದಾದ್ಯಂತ 51 ಲಕ್ಷ ಹೆಕ್ಟೇರ್ ಪ್ರದೇಶ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ವ್ಯಾಪ್ತಿಗೆ ಒಳಪಟ್ಟಿದ್ದು, 2026ರೊಳಗೆ 112 ಲಕ್ಷ ಹೆಕ್ಟೇರ್ ಪ್ರದೇಶವನ್ನು ಈ ಯೋಜನೆ ವ್ಯಾಪ್ತಿಗೆ ಒಳಪಡಿಸುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ ಎಂದು ಕೇಂದ್ರದ ಕೃಷಿ ಮತ್ತು ರೈರ ಕಲ್ಯಾಣ ರಾಜ್ಯ ಸಚಿವೆ ತಿಳಿಸಿದರು.

ಹನಿ ನೀರಾವರಿ ಯೋಜನೆಯ ಅನುದಾನದಲ್ಲಿ ಹೆಚ್ಚಿನ ಪ್ರಯೋಜನ ಪಡೆದು ಎಲ್ಲೂ ನೀರು ಪೊಲಾಗದಂತೆ ತಡೆದು, ನೀರಿನ ಸದ್ಬಳಕೆ ಮಾಡಿ ಕೊಳ್ಳುವಂತೆ ರಾಜ್ಯದ ರೈತರಲ್ಲಿ ಕೇಂದ್ರ ಸಚಿವರು ಮನವಿ ಮಾಡಿಕೊಂಡಿದ್ದಾರೆ.SHARE THIS

Author:

0 التعليقات: