ದ.ಕ. ಜಿಲ್ಲೆಯಲ್ಲಿ ಕೋವಿಡ್ಗೆ ನಾಲ್ವರು ಬಲಿ;
311 ಮಂದಿಗೆ ಕೊರೋನ ಸೋಂಕು
ಮಂಗಳೂರು, ಆ.15: ದ.ಕ. ಜಿಲ್ಲೆಯಲ್ಲಿ ರವಿವಾರ ಕೋವಿಡ್ನಿಂದಾಗಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಹೊಸದಾಗಿ 311 ಮಂದಿಗೆ ಕೊರೋನ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ 380 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.3.21ಕ್ಕೆ ಇಳಿಕೆಯಾಗಿದೆ.
ಜಿಲ್ಲೆಯಲ್ಲಿನ 1,05,844 ಸೋಂಕಿತರ ಪೈಕಿ 1,00,734 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್ಗೆ ಒಟ್ಟು 1501 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 3609 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
0 التعليقات: