ಬೆಂಗಳೂರು: 4.5 ಕೋಟಿ ರೂ ಮೌಲ್ಯದ ರಕ್ತಚಂದನ ವಶಕ್ಕೆ, ಇಬ್ಬರ ಬಂಧನ
ಬೆಂಗಳೂರು: ಕೇಂದ್ರೀಯ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಕಾರ್ಯಾಚರಣೆ ನಡೆಸಿ 4.5 ಕೋಟಿ ರೂ. ಮೌಲ್ಯದ ರಕ್ತಚಂದನ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರು ಸಿಸಿಬಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಒಟ್ಟು 4.5 ಕೋಟಿ ರೂ. ಮೌಲ್ಯದ 9 ಟನ್ ರಕ್ತಚಂದನ ಮರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
0 التعليقات: